ಬಾಗೇಪಲ್ಲಿಯಲ್ಲಿ ಪಲ್ಸ್ ಪೋಲಿಯೊ
ಬಾಗೇಪಲ್ಲಿ: 5 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿದಾಗ ಮಾತ್ರ ಭಾರತವನ್ನು ಪೋಲಿಯೊ ಮುಕ್ತ ರಾಷ್ಟ್ರವನ್ನಾಗಿಸಲು ಸಾಧ್ಯ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು.
ಪುರಸಭೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಮಗುವಿಗೆ ಪೋಲಿಯೊ ಹನಿ ಹಾಕುವುದರ ಮೂಲಕ ಚಾಲನೆ ನೀಡಿ ಮಾತನಾಡಿ, ಪೋಷಕರು ಮಕ್ಕಳಿಗೆ ಪೋಲಿಯೊ ಹನಿ ಹಾಕಿಸದ ತಪ್ಪಿಗೆ ಮಕ್ಕಳು ಮುಂದಿನ ದಿನಗಳಲ್ಲಿ ಅಂಗವೈಕಲ್ಯ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿಯನ್ನು ಹಾಕಿಸುವಂತೆ ಮನವಿ ಮಾಡಿದರು.
ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಮಾತನಾಡಿ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ 96 ಪೋಲಿಯೊ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 384 ಸಿಬ್ಬಂದಿ ಕಾರ್ಯಕ್ರಮದಲ್ಲಿ ಲಸಿಕೆ ಹಾಕುತ್ತಿದ್ದಾರೆ. 19 ಮೇಲ್ವಿಚಾರಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ತಾಲೂಕಿನಾಧ್ಯಂತ 5 ವರ್ಷದೊಳಗಿನ 19,976 ಮಕ್ಕಳಿದ್ದು, ಎಲ್ಲರಿಗೂ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪೋಷಕರೂ ಕಡ್ಡಾಯವಾಗಿ ಪೋಲಿಯೊ ಹನಿ ಹಾಕಿಸಬೇಕೆಂದು ತಿಳಿಸಿದರು. ತಹಸೀಲ್ದಾರ್ ಎಂ.ಎ. ಪದ್ಮ, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಮಂಜೇನಾಯ್ಕ್, ಪುರಸಭಾ ಸದಸ್ಯ ಆನಾ ಮೂರ್ತಿ, ಪಿ. ಸುಬಾನ್ ಸಾಬ್, ಎನ್. ರವಿ ಇದ್ದರು.
ಚಿಕ್ಕಬಳ್ಳಾಪುರದಲ್ಲಿ ಪೋಲಿಯೊ ಲಸಿಕೆ
ಚಿಕ್ಕಬಳ್ಳಾಪುರ: ಮಕ್ಕಳ ಮುಂದಿನ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುವ ಪೋಲಿಯೊ ಕಾಯಿಲೆಯನ್ನು ನಿರ್ಲಕ್ಷ್ಯದಿಂದ ನೋಡಬಾರದೆಂದು ಜಿಪಂ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ತಿಳಿಸಿದರು. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗಸ್ವಾಮಿ ಮಾತನಾಡಿ, ದೇಶವನ್ನು ಪೋಲಿಯೊ ಮುಕ್ತ ದೇಶವನ್ನಾಗಿಸಲು ಸರ್ಕಾರ ಶ್ರಮಿಸುತ್ತಿದೆ. ಇದಕ್ಕೆ ಪ್ರತಿ ವರ್ಷ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ತಾಪಂ ಅಧ್ಯಕ್ಷ ಕೃಷ್ಣಮೂರ್ತಿ, ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ. ಮಂಜುಳಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

