ಕೋಲಾರ

ಇಂಧನ ಬೆಲೆ, ದೌರ್ಜನ್ಯ ಪ್ರಕರಣ ಹೆಚ್ಚಳಕ್ಕೆ ಸಿಪಿಎಂ ತೀವ್ರ ಆಕ್ರೋಶ

Published On :

ಚಿಕ್ಕಬಳ್ಳಾಪುರ: ಅಡುಗೆ ಅನಿಲ, ಆಟೋ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೋಮುಗಲಭೆಗಳನ್ನು ಖಂಡಿಸಿ ಸಿಪಿಐ(ಎಂ) ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಶಿಡ್ಲಘಟ್ಟ ವೃತ್ತದಲ್ಲಿ ಕೆಲ ಸಮಯ ರಸ್ತೆ ಸಂಚಾರವನ್ನು ತಡೆದರಲ್ಲದೇ ಜನಪರ ಆಡಳಿತ ನೀತಿಯನ್ನು ರೂಪಿಸಲು ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಸಿಪಿಐ(ಎಂ) ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ ಮಾತನಾಡಿ, ಕೇಂದ್ರ ಸರ್ಕಾರ ಇತ್ತೀಚೆಗೆ ಅಡುಗೆ ಅನಿಲ,ಆಟೋ ಗ್ಯಾಸ್, ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಏರಿಸಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ಕಂಡು ಬಂದು ಜನ ಸಾಮಾನ್ಯರು ತೊಂದರೆಯನ್ನು ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನರಿತು ಈಗಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸಲು ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇತ್ತೀಚೆಗೆ ರಾಜ್ಯದಲ್ಲಿ ಕೋಮುಗಲಭೆಗಳು ಮತ್ತು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ದಲಿತರ ಮೇಲೆ ಬಹಿಷ್ಕಾರ ಹಾಕಿದ ಭೂ ಮಾಲೀಕರ ಪಟ್ಟ ಭದ್ರ ಅಪರಾಧಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಿಪಿಐ(ಎಂ) ಮುಖಂಡರಾದ ಜಿ. ಸಿದ್ಧಗಂಗಪ್ಪ, ಸಿ. ಗೋಪಿನಾಥ್, ಮುನಿಕೃಷ್ಣಪ್ಪ, ನಾಗರಾಜು, ರಘರಾಮರೆಡ್ಡಿ, ಅಶ್ವತ್ಥಪ್ಪ, ಆವಪ್ಪ, ಜಯರಾಮರೆಡ್ಡಿ, ಮಂಜು ನಾಥ್ ರೆಡ್ಡಿ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.