ಶೇಷಶಾಸ್ತ್ರಿ ಜಿಲ್ಲಾ ಸಮ್ಮೇಳನಾಧ್ಯಕ್ಷ
ಚಿಕ್ಕಬಳ್ಳಾಪುರ: ಬಾಗೇಪಲ್ಲಿಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯುವ 4ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇತಿಹಾಸ ತಜ್ಞ ಡಾ.ಆರ್. ಶೇಷಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೈ.ಎಲ್. ಹನುಮಂತರಾವ್ ತಿಳಿಸಿದ್ದಾರೆ.
ಆಂಧ್ರದ ಗಡಿಗೆ ಹೊಂದಿಕೊಂಡಿರುವ ಬಾಗೇಪಲ್ಲಿಯಲ್ಲಿ ಪರಭಾಷಾ ಹಾವಳಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮಾತೃಭಾಷೆ ಕನ್ನಡದ ಬಗ್ಗೆ ಈ ಭಾಗದಲ್ಲಿ ಅಭಿಮಾನ ಬೆಳೆಸುವ ನಿಟ್ಟಿನಲ್ಲಿ ಪೂರಕ ವಾತಾವರಣ ನಿರ್ಮಾಣ ಮಾಡಲು ಇಲ್ಲಿ 4 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿರುವುದರ ನಡುವೆ ಅಧ್ಯಕ್ಷರ ಆಯ್ಕೆಗೆ ಚರ್ಚೆ ನಡೆಸಲಾಯಿತು. ಇದರಲ್ಲಿ ಸಾಹಿತಿ ಜ್ಞಾನಾಂದ, ಪ್ರೊ. ಚಂದ್ರಪ್ಪ, ಗೋಪಾಲಕೃಷ್ಣ, ಡಾ.ಆರ್. ಶೇಷಶಾಸ್ತ್ರಿರವರ ಹೆಸರುಗಳು ಅಧ್ಯಕ್ಷರ ಆಯ್ಕೆಗೆ ಪ್ರಸ್ತಾಪವಾದವು. ಇದರಲ್ಲಿ ಅಂತಿಮವಾಗಿ ಶೇಷಶಾಸ್ತ್ರಿರವರ ಹೆಸರನ್ನು ಆಯ್ಕೆ ಮಾಡಲಾಯಿತು ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನೂತನ ಜಿಲ್ಲೆ ರಚನೆಯಾದ ಮೇಲೆ ಬಾಗೇಪಲ್ಲಿಯಲ್ಲಿ ನಡೆಯುತ್ತಿರುವ ಸಮ್ಮೇಳನವು ನಾಲ್ಕನೇಯದ್ದಾಗಿದೆ. ಮೊದಲನೇ ಸಮ್ಮೇಳನ ಎನ್. ಬಸವಾರಾಧ್ಯ, 2 ನೇ ಸಮ್ಮೇಳನ ಕೈಪು ಲಕ್ಷ್ಮೀ ನರಸಿಂಹಶಾಸ್ತ್ರಿ, 3 ನೇ ಸಮ್ಮೇಳನ ಗುಡಿಬಂಡೆ ಪೂರ್ಣಿಮಾ ಅಧ್ಯಕ್ಷತೆಯಲ್ಲಿ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

