ಈದ್ ಮಿಲಾದ್; ನೇತ್ರ ತಪಾಸಣೆ, ರಕ್ತದಾನ ಶಿಬಿರ
ಚಿಕ್ಕಬಳ್ಳಾಪುರ: ಈದ್ ಮಿಲಾದ್ ಪ್ರಯುಕ್ತ ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯಲ್ಲಿ ರಯಾನ್ ಫೌಂಡೇಶನ್, ಡಾ. ಸೋಲಂಕಿ ಕಣ್ಣಿನ ಆಸ್ಪತ್ರೆ ಹಾಗೂ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ವತಿಯಿಂದ 5ನೇ ವರ್ಷದ ಉಚಿತ ನೇತ್ರ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿ ವ್ಯವಸ್ಥಾಪಕ ರವಿ, ಜಿಲ್ಲೆಯಲ್ಲಿ ಅನೇಕ ತುರ್ತು ಸಂದರ್ಭಗಳಲ್ಲಿ ಹೆಚ್ಚಿಗೆ ರಕ್ತದ ಅವಶ್ಯಕತೆಯನ್ನು ಬಹಳಷ್ಟು ಮಂದಿ ಎದುರಿಸುವುದರಿಂದ ರಕ್ತದಾನ ಮಾಡಲು ಸಾರ್ವಜನಿಕರು ಮುಂದಾಗಬೇಕು.ಈ ಮೂಲಕ ರಕ್ತದ ಕೊರತೆಯಿಂದ ಸಾಯುವವರ ಜೀವವನ್ನು ಉಳಿಸಬೇಕು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ರಕ್ತದಾನ ಶಿಬಿರಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಂಡು ರಕ್ತದಾನ ಮಾಡುವಂತೆ ಜನರನ್ನು ಪ್ರೋತ್ಸಾಹಿಸಬೇಕೆಂದರು. ದೇವರಾಜ್ ಅರಸು ಮೆಡಿಕಲ್ ಕಾಲೇಜಿನ ಕಾರ್ಯದರ್ಶಿ ಜಿ.ಹೆಚ್. ನಾಗರಾಜ್, ರಯಾನ್ ಸಂಸ್ಥೆ ಅಧ್ಯಕ್ಷ ಬಿ.ಎಸ್. ರಫೀವುಲ್ಲಾ, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ಕೆಎಂಎಫ್ ನಿರ್ದೇಶಕ ಕೆ.ವಿ. ನಾಗರಾಜ್, ದಸಂಸ ರಾಜ್ಯ ಸಂಚಾಲಕ ಕೆ.ಸಿ. ರಾಜಾಕಾಂತ್, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಕೆ.ಹೆಚ್. ವೆಂಕಟಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಭದ್ರಾಚಲಂ, ವೈದ್ಯರಾದ ಪಿಂಕಿ, ದಿವ್ಯ, ರಯಾನ್ ಸಂಸ್ಥೆಯ ಮೊಹಮ್ಮದ್ ಉಸಾಮಾ, ಏ.ಕೆ.ಫರೀದ್ ಬಾಬು, ಖಲೀಲ್ ಅಹ್ಮದ್, ಅಮೀರ್, ಸೈಯದ್ ಉಸ್ಮಾನ್, ಶುಯೇಬ್, ಇಕ್ಬಾಲ್ ಇತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

