ಬಸ್ಸಿಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪರದಾಟ
ಕೋಲಾರ: ಸರ್ಕಾರಿ ಬಸ್ ಅವಲಂಬಿತ ಪ್ರಯಾಣಿಕರಿಗೆ ಉತ್ತಮ ಸೇವೆ ಕಲ್ಪಿಸಬೇಕಾದ ಕೆಎಸ್ಆರ್ಟಿಸಿ ಸಕಾಲಕ್ಕೆ ಮತ್ತು ಅಗತ್ಯಕ್ಕೆ ತಕ್ಕಷ್ಟು ಬಸ್ಗಳ ವ್ಯವಸ್ಥೆ ಮಾಡದಿರುವುದರಿಂದ ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶದ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ವಿವಿಧ ಕಡೆಗಳಿಂದ ಕೋಲಾರಕ್ಕೆ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಬಂದು ಶಾಲಾ-ಕಾಲೇಜು ಮುಗಿಸಿ ವಾಪಸ್ಹೋಗುವಾಗ ನರಕಯಾತನೆ ಅನುಭವಿಸುತ್ತಾರೆ. ಜತೆಗೆ ಸಾವಿರಾರು ಪ್ರಯಾಣಿಕರು ಸಹ ಸರ್ಕಾರಿ ಬಸ್ ಅವಲಂಬಿತರಾಗಿದ್ದು ಜನತೆಯ ಬೇಡಿಕೆಗೆ ತಕ್ಕಷ್ಟು ಬಸ್ಗಳನ್ನು ಒದಗಿಸದಿರುವುದರಿಂದ ಪರದಾಡುವುದು ಮಾಮೂಲಿಯಾಗಿದೆ. ಶ್ರೀನಿವಾಸಪುರ, ಚಿಂತಾಮಣಿ, ನರಸಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸುತ್ತಿದ್ದು ಸಂಸ್ಥೆಯ ಅಧಿಕಾರಿಗಳಿಗೆ ಜನರ ಕಷ್ಟ ಗೊತ್ತಿದ್ದರೂ ಜಾಣ ಕುರುಡರಾಗಿದ್ದಾರೆ. ವಿದ್ಯಾರ್ಥಿಗಳು ಬಸ್ಪಾಸ್ ಹೊಂದಿರುವುದರಿಂದ ಕೆಲವು ಬಸ್ ಚಾಲಕರು ಮತ್ತು ನಿರ್ವಾಹಕರು ವಿದ್ಯಾರ್ಥಿಗಳನ್ನು ಕಂಡರೆ ತಾತ್ಸಾರದಿಂದ ನೋಡುವುದಲ್ಲದೆ, ಪುಕ್ಕಟೆ ಕರೆದುಕೊಂಡು ಹೋಗುವ ರೀತಿಯಲ್ಲಿ ಕಾಣುವುದರಿಂದ ವಿದ್ಯಾರ್ಥಿಗಳು ಶೋಷಣೆಗೆ ಒಳಗಾಗುವಂತಾಗಿದೆ. ಕೋಲಾರದಿಂದ ಮ.12 ಗಂಟೆ ನಂತರ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ವಾಪಸ್ ಹೋಗುವುದಕ್ಕೆ ಅಗತ್ಯ ಬಸ್ ವ್ಯವಸ್ಥೆ ಮಾಡಬೇಕು. ಸರ್ಕಾರದಿಂದ ನೀಡಿರುವ ಹೊಸ ಬಸ್ಸುಗಳಲ್ಲಿ ಶೇ. 50ರಷ್ಟು ಬಸ್ಸುಗಳನ್ನು ಗ್ರಾಮೀಣ ಪ್ರದೇಶಗಳಿಗೆ ನೀಡಬೇಕು, ಅಂತರಗಂಗೆ ಸಾರಿಗೆ ವ್ಯವಸ್ಥೆಯನ್ನು ಕೋಲಾರದಿಂದ ಕನಿಷ್ಠ 10ಕಿಮೀ ವ್ಯಾಪ್ತಿಯ ಹಳ್ಳಿಗಳಿಗೆ ವಿಸ್ತರಣೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ, ರೈತರಿಗೆ ಅನುಕೂಲ ಮಾಡಿದಲ್ಲಿ ಮಾತ್ರ ಸಾರಿಗೆ ಸಂಸ್ಥೆಯ ನಿಜವಾದ ಧ್ಯೇಯ ಈಡೇರುತ್ತದೆ ಎಂದು ವಿದ್ಯಾರ್ಥಿಗಳು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

