ಬಾಲ್ಯದಲ್ಲಿಯೇ ಮಕ್ಕಳಿಗೆ ಸಂಸ್ಕಾರ ಕಲಿಸಿ
ಮಾಲೂರು: ವಿದ್ಯಾರ್ಥಿಗಳಿಂದ ಫಲಿತಾಂಶ ನಿರೀಕ್ಷಿಸುವ ಪೋಷಕರು ಹಾಗೂ ವಿದ್ಯಾ ಸಂಸ್ಥೆಗಳು ಫಲಿತಾಂಶದ ಜತೆಯಲ್ಲಿ ಮಕ್ಕಳಲ್ಲಿ ಸಂಸ್ಕಾರವನ್ನೂ ಬೆಳೆಸುವಂತಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಜೆ. ನಾಗರಾಜ್ ಹೇಳಿದರು.
ಪಟ್ಟಣದ ಜೆಎಸ್ಎಸ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕಾಲೇಜು ವಾರ್ಷಿಕೋತ್ಸವದಲ್ಲಿ ಮಾತನಾಡಿ, ಇಂದಿನ ಯುವ ಜನಾಂಗ ಮನಸ್ಸನ್ನು ಹತೋಟಿಯಟ್ಟುಕೊಳ್ಳಲಾಗದೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿ ನಮ್ಮ ಸಂಸ್ಕೃತಿ ಅವನತಿ ಕಡೆ ಸಾಗುತ್ತಿದೆ. ನಮ್ಮ ಸನಾತನ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ನೀಡುತ್ತಿದ್ದು, ಪ್ರಂಪಚಕ್ಕೆ ಮಾದರಿಯಾಗಿದೆ. ಆದರೆ ಒಂದು ಅಂಕಿಅಂಶದ ಪ್ರಕಾರ ನಮ್ಮ ದೇಶದಲ್ಲಿ ಮದ್ಯ ಸೇವನೆ ಮಾಡುವ ಮಹಿಳೆಯರು ಹೆಚ್ಚಾಗಿದ್ದು, ಪ್ರಂಪಚದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ವಿಷಾದಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪುರಸಭೆ ಸದಸ್ಯ ಲಿಂಗೇಶ್ವರಯ್ಯ, ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಯುವ ಜನಾಂಗದ ಮೇಲಿದ್ದು, ತಮ್ಮ ಭವಿಷ್ಯದ ಜತೆಯಲ್ಲಿ ದೇಶದ ಅಬಿವೃದ್ಧಿ ನಿಮ್ಮ ಗುರಿಯಾಗಿರಲಿ ಎಂದರು. ನಟ ವಿರಾಟ್ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಜನಪದ ಗಾಯಕ ಜನ್ನಘಟ್ಟ ಕೃಷ್ಣಮೂರ್ತಿ ಗಾಯನದಿಂದ ವಿದ್ಯಾರ್ಥಿಗಳ ಮನ ಸೆಳೆದರು. ಪ್ರಾಂಶುಪಾಲ ಶಿವಾನಂದ್, ಕಸಾಪ ಜಿಲ್ಲಾ ಗೌರವಕಾರ್ಯದರ್ಶಿ ಅಶ್ವಥ್ ರೆಡ್ಡಿ, ಕಸಾಪ ಅಧ್ಯಕ್ಷ ಮಧುಸೂಧನ್, ಉಪನ್ಯಾಸಕ ಗುರುಪಾದಸ್ವಾಮಿ, ಚಂದ್ರಶೇಖರ್, ಉಮೇಶ್ ಇದ್ದರು.
ದೇವಾಲಯದಲ್ಲಿ ಚಿನ್ನಾಭರಣ, ನಗದು ಕಳವು
ಚಿಂತಾಮಣಿ: ದೇವಾಲಯದ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನ, ಬೆಳ್ಳಿ ಒಡವೆ ಮತ್ತು ನಗದು ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬೂರು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕುರುಬೂರು ಗ್ರಾಮದ ಸೋಮೇಶ್ವರ ದೇವಾಲಯದ ಬಾಗಿಲು ಬೀಗ ಒಡೆದ ದುಷ್ಕರ್ಮಿಗಳು ದೇವಾಲಯದ ಒಳನುಗ್ಗಿ ದೇವರ ಮೇಲಿದ್ದ ಕಾಲು ಕೆಜಿ ಬೆಳ್ಳಿ, ಬಂಗಾರದ ಒಲೆ, ಮೂಗುನತ್ತು, ಸಾವಿರಾರು ರುಪಾಯಿ ಹುಂಡಿ ಹಣವನ್ನು ರಾತ್ರೋರಾತ್ರಿ ದೋಚಿ ಪರಾರಿಯಾಗಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಚಿಕ್ಕಬಳ್ಳಾಪುರ ಮತ್ತು ಕೋಲಾರ ಕಡೆಯಿಂದ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಿ ಸ್ಥಳ ಪರಿಶೀಲಿಸಲಾಯಿತು.
ಸ್ಥಳದಲ್ಲಿ ಡಿವೈಎಸ್ಪಿ ಸಣ್ಣತಿಮ್ಮಪ್ಪ ಮತ್ತು ಸಬ್ಇನ್ಸ್ಪೆಕ್ಟರ್ ರಾಘವೇಂದ್ರ ಸ್ಥಳ ಪರಿಶೀಲಿಸಿ ನಂತರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

