ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಲು ಸಲಹೆ
ಗೌರಿಬಿದನೂರು: ವಿದ್ಯಾರ್ಥಿಗಳು ಕ್ರೀಡೆ, ಸಾಹಿತ್ಯದ ಅಭಿರುಚಿ ಬೆಳೆಸಿಕೊಂಡು ಸರ್ವತೋಮುಖ ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಬೇಕು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನ ಪಡೆದು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ರಂಗಾರೆಡ್ಡಿ ಕೋಡಿರಾಂಪುರ ತಿಳಿಸಿದರು.
ಪಟ್ಟಣದ ಆಚಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2013-2014ನೇ ಸಾಲಿನ ಸಾಂಸ್ಕೃತಿಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸದೇ ಪಾಶ್ಚಿಮಾತ್ಯ ನಾಗರಿಕತೆಯನ್ನು ಪಾಲಿಸುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಶಾಲಾ ಕಾಲೇಜು ಹಂತದಲ್ಲಿ ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಕ್ಕಳು ದೇಸೀಯ ಸಂಸ್ಕೃತಿ ಅರಿತು ಪಾಲಿಸುವುದಕ್ಕೆ ಸಹಕಾರಿಯಾಗುತ್ತವೆ ಎಂದು ಪ್ರಾಂಶುಪಾಲರಾಜಶೇಖರ್ ತಿಳಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಬಿ.ಎನ್.ರಾಮಯ್ಯ, ಕಾರ್ಯದರ್ಶಿ ಎ.ಎನ್.ಬಲರಾಂ, ಸುಗುಣಾಕರ್, ಎಂ.ರಂಗಪ್ಪ, ಕೆ.ಎಸ್.ರೇಷ್ಮಾ, ವಿ.ನರಸಿಂಹಪ್ಪ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಇಂಗ್ಲಿಷ್ ಜ್ಞಾನ ಹೆಚ್ಚಿಸಲು ಸಲಹೆ
ಮಾಲೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಲ್ಲಿ ಇಂಗ್ಲಿಷ್ ಜ್ಞಾನ ಹೆಚ್ಚಿಸುವ ಕಡೆ ಗಮನ ಹರಿಸಬೇಕು ಎಂದು ಶಾಸಕ ಕೆ.ಎಸ್. ಮಂಜುನಾಥ್ ಹೇಳಿದರು. ತಾಲೂಕಿನ ಚಿಕ್ಕಕುಂತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಸೈಕಲ್ ವಿತರಿಸಿ ಮಾತನಾಡಿದರು. ಜಿ.ಪಂ.ಸದಸ್ಯ ರಾಮಸ್ವಾಮಿ ರೆಡ್ಡಿ ಮಾತನಾಡಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಗ್ರಾಪಂ ಅಧ್ಯಕ್ಷ ಲಕ್ಷಮ್ಮ, ಕೃಷ್ಣೇಗೌಡ ಇದ್ದರು.
ಇಂದಿನಿಂದ ಕೃಷಿ ಪ್ರದರ್ಶನ
ಗೌರಿಬಿದನೂರು: ನಗರದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಜ.22ರಿಂದ 24ರವರೆಗೆ ಕೃಷಿ ಮತ್ತು ಗ್ರಾಹಕರ ಅಭಿವೃದ್ಧಿ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ವ್ಯವಸ್ಥಾಪಕ ಸುರೇಶ್ ತಿಳಿಸಿದರು. ಉಪಸಭಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಚಂದ್ರಮೋಹನ್, ಮುಖ್ಯ ಅತಿಥಿಗಳಾಗಿ ರಾಘವೇಂದ್ರ ಹನುಮಾನ್, ಕೇಶವರೆಡ್ಡಿ, ವಿ.ರಮೇಶ್, ರೆಡ್ಡೆಪ್ಪ, ಹನುಮಂತೇಗೌಡ ಪಾಲ್ಗೊಳ್ಳಲಿದ್ದಾರೆ ಎಂದರು. ಉತ್ಸವದಲ್ಲಿ ಕೃಷಿಗೆ ಸಂಬಂಧಿಸಿದ ಕಂಪನಿಗಳ ಸ್ಟಾಲ್ಗಳು ವಸ್ತು ಪ್ರದರ್ಶನ ನಡೆಸಲಿದೆ ಎಂದರು.
ಆರೋಗ್ಯ ಉಚಿತ ಶಿಬಿರ ಯಶಸ್ವಿ
ಶ್ರೀನಿವಾಸಪುರ; ಬಡವರಿಗೆ ಸರ್ಕಾರದಿಂದ ದೊರೆಯುವ ಸೌಲತ್ತುಗಳ ಮಾಹಿತಿ ನೀಡಲು ಸಾರ್ವಜನಿಕರಿಗೆ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಜನರಿಗೆ ನೆರವಾಗಬೇಕಾಗಿದೆ ಎಂದು ಮಾಜಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು. ತಾಲೂಕಿನ ದೇವಲಪಲ್ಲಿ ಗ್ರಾಮದ ಸ್ವಾಮಿ ವಿವೇಕಾನಂದ ಚಾರಿಟಬಲ್ಟ್ರಸ್ಟ್ವತಿಯಿಂದ ಹಮ್ಮಿಕೊಂಡಿದ್ದ ನೇತ್ರ ಉಚಿತ ತಪಾಸಣೆ, ಡಯಾಬಿಟಿಸ್ ಮತ್ತು ರಕ್ತದೊತ್ತಡ ಪರೀಕ್ಷೆ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಶಿಬಿರದಲ್ಲಿ ಸುತ್ತಮುತ್ತಲ ಗ್ರಾಮಗಳ ಜನರು ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

