ಕೋಲಾರ

ಹಿಂದುಳಿದವರಿಗೆ ವಿಶೇಷಪ್ಯಾಕೇಜ್: ಸಿಎಂಗೆ ಮನವಿ

Published On :

ಚಿಂತಾಮಣಿ: ರಾಜ್ಯ ಬಜೆಟ್ನಲ್ಲಿ ಹಿಂದುಳಿದ ವರ್ಗಗಳಿಗೆ ವಿಶೇಷ ಪ್ಯಾಕೇಜ್ ಮತ್ತು ಶಾಶ್ವತ ನೀರಾವರಿ ಬಗ್ಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಬೆಂಗಳೂರಿನ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯನವರ ಜೊತೆ ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಮುದ್ದುಕೃಷ್ಣ ಯಾದವ್ ತಿಳಿಸಿದ್ದಾರೆ.
ಅವರು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, 2014-15ರ ರಾಜ್ಯ ಬಜೆಟ್ನಲ್ಲಿ ಹಿಂದುಳಿದ ವರ್ಗಗಳಿಗೆ ವಿಶೇಷ ಪ್ಯಾಕೇಜ್ ಮತ್ತು ಶಾಶ್ವತ ನೀರಾವರಿ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಕರ್ನಾಟಕದಲ್ಲಿ ಶೇ.60 ರಷ್ಟು ಹಿಂದುಳಿದ ವರ್ಗಗಳ ಸಮಾಜಗಳು ನೆಲೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳಲ್ಲಿ ತಾವು ದಿಟ್ಟ ನೇರ ತೀರ್ಮಾನ ತೆಗೆದುಕೊಂಡು ಅಹಿಂದ ವರ್ಗಗಳಿಗೆ ನಿಗಮ ಮಂಡಳಿಗಳ ಸಾಲ ಮನ್ನಾ ಹಾಗೂ ಅನ್ನಭಾಗ್ಯ, ಶಾದಿಭಾಗ್ಯ, ಶಾಲೆಗೆ ಹೋಗುವ ಹೆಣ್ಣು ಮಕ್ಕಳಿಗೆ 2 ಪ್ರೋತ್ಸಾಹ ಧನ, ವಿದ್ಯಾಸಿರಿ ಯೋಜನೆ ಹಾಗೂ ಅನೇಕ ಯೋಜನೆಗಳನ್ನು ರೂಪಿಸಿರುವುದು ಹಿಂದುಳಿದ ವರ್ಗಗಳ ಜನಾಂಗಕ್ಕೆ ತುಂಬಾ ಸಂತೋಷಕರವಾಗಿದೆ. ಮುಂಬರುವ ಬಜೆಟ್ನಲ್ಲಿ ಹಿಂದುಳಿದ ವರ್ಗಗಳಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ, ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ, ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಕ್ಕೆ ವಿಶೇಷ ಪ್ಯಾಕೇಜ್ ನೀಡಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.