ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ
ಚಿಂತಾಮಣಿ: ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಪೊಲೀಸರಿಗೆ ಮುಖ್ಯ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ನೂತನ ರಕ್ಷಣಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ಹೇಳಿದರು.
ಅವರು ನಗರದ ಕೆ.ಎಂ.ಡಿ ಸುವರ್ಣ ಕಲ್ಯಾಣ ಮಂದಿರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕರಿಸಿ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾಜ ಘಾತಕ ಶಕ್ತಿಗಳನ್ನು ಮಟ್ಟ ಹಾಕಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿದರೆ ಮಾತ್ರ ಸಾಧ್ಯವಾದಷ್ಟು ಅಪರಾಧ ತಡೆಯಲು ಸಾಧ್ಯ ಎಂದು ತಿಳಿಸಿದರು. ಸಭೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಿಂದ ನೂರಾರು ಜನರು ವಿವಿಧ ಸಮಸ್ಯೆಗಳಾದ ಸಂಚಾರಿ ಅವ್ಯವಸ್ಥೆ, ಫುಟ್ಪಾತ್ ಅತಿಕ್ರಮಣ, ಮರಳು ದಂಧೆ, ಜೂಜು, ಮಟ್ಕಾ, ಅಕ್ರಮ ಮದ್ಯ ಮಾರಾಟ, ಭೂ ಮಾಫಿಯಾ ಸೇರಿದಂತೆ ಇನ್ನೂ ಹಲವು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ನಾಗರಿಕರ ಜೊತೆ ಮುಕ್ತವಾಗಿ ಚರ್ಚಿಸಲಾಯಿತು. ಈ ವೇಳೆ ಡಿವೈಎಸ್ಪಿ ಸಣ್ಣತಿಮ್ಮಪ್ಪ, ವೃತ್ತ ನಿರೀಕ್ಷಕರಾದ ನಂಜಪ್ಪ, ವೆಂಕಟೇಶಮೂರ್ತಿ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಯನುಮಲಪಾಡಿ ಚಂದ್ರಾರೆಡ್ಡಿ,ವೆಂಕಟರವಣಪ್ಪ, ಜಂಗಮಶಿಗೇನಹಳ್ಳಿ ದೇವರಾಜ್, ಕೃಷ್ಣ, ರಘುನಾಥರೆಡ್ಡಿ, ಲಕ್ಷ್ಮಿನಾರಾಯಣ, ಕವಾಲಿ ವೆಂಕಟರವಣಪ್ಪ, ಜೈಭೀಮ್ ಮುರಳಿ, ಊಲವಾಡಿ ಬಾಬು ಇನ್ನೂ ಹಲವು ಮುಖಂಡರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

