ಕೋಲಾರ

ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Published On :


ಕೋಲಾರ: ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ವಿಜಯಕೃಷ್ಣ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಡಿವೈಎಫ್ಐ ಕಾರ್ಯಕರ್ತರು ಮಂಗಳವಾರ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಭಾನುವಾರ ಪತ್ರಕರ್ತರ ಭವನದ ಶೌಚಾಲಯದ ಬಳಿ ವಿಜಯಕೃಷ್ಣ ಮೇಲೆ ಕೋತಿ ಮಂಜು ಮತ್ತು ರಮೇಶ್ ಎಂಬುವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ, ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರೂ ಆರೋಪಿಗಳನ್ನು ಬಂಧಿಸಿಲ್ಲವೆಂದು ಡಿ.ವೈ.ಎಫ್.ಐ ಜಿಲ್ಲಾಧ್ಯಕ್ಷ ಸಂಪಂಗಿ ಆರೋಪಿಸಿದರು.
ಇಂತಹ ಸಮಾಜ ಘಾತುಕರನ್ನು ಬಂಧಿಸಿ ರೌಡಿ ಪಟ್ಟಿಗೆ ಸೇರಿಸಬೇಕು ಮತ್ತು ಇವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಡಿ.ವೈ.ಎಫ್.ಐ ತಾಲೂಕು ಅಧ್ಯಕ್ಷ ರಮೇಶ್, ಉಪಾಧ್ಯಕ್ಷ ಪಿ.ವಿ. ರಮಣ್, ಕಾರ್ಯದರ್ಶಿ ರಾಮಾಂಜಿ, ಸಹಕಾರ್ಯದರ್ಶಿ ಸುಬ್ರಮಣಿ, ರಾಜೇಂದ್ರಪ್ರಸಾದ್,  ಕೆ.ಪಿ.ಆರ್.ಎಸ್.ನ ಟಿ.ಎಂ. ವೆಂಕಟೇಶ್, ಗಂಗಮ್ಮ, ನಾರಾಯಣಮ್ಮ, ಸುಶೀಲಮ್ಮ, ಆಂಜಮ್ಮ, ಎಸ್.ಎಫ್.ಐ. ಅಂಬರೀಶ್, ಮುಸ್ತಾಪ್, ಭೀಮರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.