ಕೋಲಾರ

ಕಾಮಗಾರಿಗಳಿಗೆ ಗುದ್ದಲಿ ಪೂಜೆ

Published On :

ಶಿಡ್ಲಘಟ್ಟ: ತಾಲೂಕಿನ ವೈ.ಹುಣಸೇನಹಳ್ಳಿ ಗ್ರಾಪಂ ವ್ಯಾಪ್ತಿಯ ಕದಿರಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ 37 ಸೈಕಲ್ ವಿತರಣೆ ಮಾಡಿ ಶಾಸಕ ರಾಜಣ್ಣ ಮಾತನಾಡಿದರು.
ಗ್ರಾಮದಲ್ಲಿ 48.44 ಲಕ್ಷರು.ಗಳ ಅಂದಾಜು ಮೊತ್ತದಲ್ಲಿ 3,600 ಮೀ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಹಾಗೂ ಆನೆಮಡುಗು ಗ್ರಾಮದಲ್ಲಿ 15 ಲಕ್ಷ ರು.ಗಳ      300 ಮೀ ಉದ್ದದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟಕ್ಕೆ ರಾಜಿಯಾಗದೆ ಕೆಲಸ ಮಾಡಬೇಕು. ಗ್ರಾಮಸ್ಥರು ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಪಕ್ಷಾತೀತವಾಗಿ ಸ್ಪಂದಿಸಬೇಕು. 30 ರಿಂದ ಶುರುವಾಗುವ ಅಧಿವೇಶನದಲ್ಲಿ ಶಾಸಕರಿಗೆ ಹೆಚ್ಚಿನ ಅನುಧಾನ ಹಾಗು ಸುವರ್ಣಗ್ರಾಮ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಹೇಳಿದರು. ಮುನಿಯಪ್ಪ, ದೊಣ್ಣಹಳ್ಳಿ ರಾಮಣ್ಣ, ರಾಮಾಂಜಿನಪ್ಪ, ಮುನೇಗೌಡ, ರವಿಕುಮಾರ್ ಎಚ್.ಸಿ.ನಾರಾಯಣಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.