ಕೋಲಾರ

ಗ್ರಾಹಕರ ವೇದಿಕೆಗಳಿಗೆ ನ್ಯಾಯಾಧೀಶರ ನೇಮಿಸಲು ಆಗ್ರಹಿಸಿ ಪ್ರತಿಭಟನೆ

Published On :

ಕೆಜಿಎಫ್: ರಾಜ್ಯದಲ್ಲಿ ಹನ್ನೊಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಗಳಿಗೆ ನ್ಯಾಯಾಧೀಶರನ್ನು ನೇಮಿಸುವಂತೆ ಒತ್ತಾಯಿಸಿ ನವಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ ನೇತೃತ್ವದಲ್ಲಿ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ವೃತ್ತನಿರೀಕ್ಷಕ ಲಕ್ಷ್ಮೀನಾರಾಯಣ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎನ್. ರಾಜಗೋಪಾಲಗೌಡ, ರಾಜ್ಯದಲ್ಲಿ ಕೋಲಾರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಹಾಸನ, ಹಾವೇರಿ, ಗದಗ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಹಲವಾರು ವರ್ಷಗಳಿಂದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಗಳಿಗೆ ನ್ಯಾಯಾಧೀಶರನ್ನು ನೇಮಿಸದ ಕಾರಣ ಸುಮಾರು 11,863 ಅರ್ಜಿಗಳು ವಿಲೇವಾರಿಯಾಗದೆ ಉಳಿದಿದೆ. ಈ ಹಿನ್ನಲೆಯಲ್ಲಿ ಕೂಡಲೇ ಸರ್ಕಾರ ಹಾಗೂ ಕಾನೂನು ಸಚಿವರು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಗಳ ನ್ಯಾಯಾಧೀಶರನ್ನು ನೇಮಿಸಬೇಕು ಇಲ್ಲವಾದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ನಕರವೇ ಜಿಲ್ಲಾಧ್ಯಕ್ಷ ಚಿನ್ನಿವಂಕಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದುಕುಳ ದೇವರಾಜ್, ಜಿಲ್ಲಾ ಉಪಾಧ್ಯಕ್ಷ ಸುನಿಲ್ಕುಮಾರ್, ನಗರಾಧ್ಯಕ್ಷ ವಿಜಯ್, ನಗರ ಉಪಾಧ್ಯಕ್ಷ ಸೋಮನಾಥ್, ಸುಪ್ರೀಂ ವೆಂಕಟೇಶ್, ಮುನಿಸ್ವಾಮಿ, ಶಂಕರಗೌಡ, ಸೆಲ್ವಿ, ನಾರಾಯಣಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.