ಕೋಲಾರ

ಮನೆ ಕಳವು ಪ್ರಕರಣ ಭೇದಿಸಿದ ಪೊಲೀಸರು

Published On :

ಕೆಜಿಎಫ್: ಉರಿಗಾಂ ವೃತ್ತದ ಪೊಲೀಸರು ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಿ ಸುಮಾರು 1.42 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕೆಜಿಎಫ್ ವರಿಷ್ಠಾಧಿಕಾರಿ ಡಾ. ರೋಹಿಣಿಕಟೋಚ್ ಸೆಫಟ್ ತಿಳಿಸಿದ್ದಾರೆ.
ಕಳೆದ 17 ರ ರಾತ್ರಿ ಬೆಮೆಲ್ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲಾರ್ನಗರದ ನಿವಾಸಿ ಎಸ್.ಶ್ರೀನಿವಾಸ್ ಎಂಬವರ ಪತ್ನಿ ಬಿಂದುಲಕ್ಷ್ಮೀ ದೇವಸ್ಥಾನಕ್ಕೆ ಹೋಗಿದ್ದಾಗ ಆರೋಪಿ ಪವನ್ಕುಮಾರ್ ಎಂಬವ ನಕಲಿ ಕೀಲಿ ಬಳಸಿ ಮನೆಯ ಒಳಗೆ ಪ್ರವೇಶಿಸಿ ಬೀರುವಿನಲ್ಲಿಟ್ಟಿದ್ದ 90 ಸಾವಿರ ನಗದು, ಲ್ಯಾಪ್ಟಾಪ್, ಡಿಜಿಟಲ್ ಕ್ಯಾಮೆರಾ, ಮೊಬೈಲ್ ಹಾಗೂ ಇತರೆ 1.42 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗಿದ್ದ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಬಂಧನಕ್ಕೆ ವರಿಷ್ಠಾಧಿಕಾರಿ ಡಾ. ರೋಹಿಣಿಕಟೋಚ್ ಸೆಫಟ್ ಅವರು ವಿಶೇಷ ಪೊಲೀಸ್ ತಂಡ ರಚಿಸಿದ್ದ ಹಿನ್ನಲೆಯಲ್ಲಿ ಘಟನೆ ನಡೆದ 4 ದಿನಗಳಲ್ಲಿ ಆರೋಪಿ ಪವನ್ಕುಮಾರ್ನನ್ನು ಬಂಧಿಸಿ ಆತನಿಂದ ಕಳ್ಳತನದ ಮಾಲನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಉರಿಗಾಂ ಸಿಪಿಐ ಎಂ.ಎಸ್. ಪವನ್ಕುಮಾರ್, ಪಿಎಸ್ಐ ಮಾರ್ಕೋಂಡಯ್ಯ, ಅಪರಾಧ ಪಿಎಸ್ಐ ನಾರಾಯಣಸ್ವಾಮಿ ಹಾಗೂ ಪೊಲೀಸ್ ಸಿಬ್ಬಂದಿಯನ್ನು ವರಿಷ್ಠಾಧಿಕಾರಿ ಡಾ. ರೋಹಿಣಿಕಟೋಚ್ ಸೆಫಟ್ ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.