ಸುತ್ತಮುತ್ತಲ ಪರಿಸರ ಸ್ವಚ್ಛತೆ ಕಾಪಾಡಿ ಆರೋಗ್ಯಕರ ಜೀವನ ನಡೆಸಲು ಸಲಹೆ
ಕ.ಪ್ರ.ವಾರ್ತೆ ಗುಡಿಬಂಡೆ ಜ.22
ಪ್ರತಿಯೊಬ್ಬರು ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ನಿರಂತರವಾಗಿ ಕಾಪಾಡಿಕೊಂಡು ಆರೋಗ್ಯಕರ ಜೀವನ ನಡೆಸಬೇಕೆಂದು ಕರುಣ ಟ್ರಸ್ಟ್ ಸಂಯೋಜಕ ವೇಣುಗೋಪಾಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಸೋಮೇನಹಳ್ಳಿ ಹೋಬಳಿಯ ದಿನ್ನೇಮೇಲಿನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆಘ್ಯಂ ಸಂಸ್ಥೆ, ಕರುಣಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನೀರಿನ ಗುಣಮಟ್ಟ ನಿರ್ವಹಣಾ ಜಾಥಾ ಮತ್ತು ನೈರ್ಮಲ್ಯ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಶುದ್ಧವಾದ ಕುಡಿಯುವ ನೀರಿನ ಸೇವನೆ ಅನಾರೋಗ್ಯದಿಂದ ನರಳುವಂತೆ ಮಾಡುತ್ತದೆ.ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಶುದ್ಧವಾದ ನೀರನ್ನೇ ಕುಡಿಯಬೇಕು. ಆದರೆ, ಈ ಭಾಗದಲ್ಲಿ ಫ್ಲೋರೈಡ್ ಸಮಸ್ಯೆ ಹೆಚ್ಚಿಗೆ ಕಾಡುತ್ತಿದ್ದು ಅನೇಕರು ಫ್ಲೋರೋಸೀಸ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಸರ್ಕಾರದ ಜೊತೆಗೂಡಿ ಶುದ್ದವಾದ ಕುಡಿಯುವ ನೀರನ್ನು ಜನರಿಗೆ ಪೂರೈಕೆ ಮಾಡಲು ಮುಂದಾಗಬೇಕು. ಈ ಮೂಲಕ ಜನರ ಆರೋಗ್ಯವನ್ನು ಕಾಪಾಡಬೇಕೆಂದು ಸಲಹೆ ನೀಡಿದರು.
ನೈರ್ಮಲ್ಯವನ್ನು ಕಾಪಾಡುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಬಹುದು. ಇದಕ್ಕೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ಶಾಲಾ ಕಾಲೇಜುಗಳಲ್ಲಿ, ಅದರಲ್ಲೂ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಅರಿವು ಕುರಿತ ಕಾರ್ಯಕ್ರಮಗಳನ್ನು ಹೆಚ್ಚಿಗೆ ಹಮ್ಮಿಕೊಳ್ಳಬೇಕೆಂದರು.
ಮುಖ್ಯ ಶಿಕ್ಷಕ ಎನ್. ಮಂಜುನಾಥ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ನಾನಾ ಕಾರಣಗಳಿಂದ ನಮ್ಮ ಸುತ್ತಮುತ್ತಲಿನ ಪರಿಸರವು ಹೆಚ್ಚಿಗೆ ಮಲಿನವಾಗುತ್ತಿದೆ. ನಾವು ಸೇವಿಸುವಂತಹ ಗಾಳಿ, ಜೊತೆಗೆ ಕುಡಿಯುವ ನೀರು ಸಹ ಮಾಲಿನ್ಯಕ್ಕೆ ಗುರಿಯಾಗುತ್ತಿರುವುದನ್ನು ಪ್ರತಿಯೊಬ್ಬರು ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಕ್ಕಳಲ್ಲಿ ನೈರ್ಮಲ್ಯ ಕಾಪಾಡುವ ಬಗ್ಗೆ ಶಿಕ್ಷಕರು ಅರಿವು ಮೂಡಿಸಬೇಕಲ್ಲದೇ ಪರಿಸರವನ್ನು ಸಂರಕ್ಷಿಸುವ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕೆಂದ ಅವರು, ವಿದ್ಯಾರ್ಥಿಗಳು ಸಹ ತಾವು ತಿಳಿದುಕೊಳ್ಳುವುದಲ್ಲದೇ ಇತರರಿಗೂ ನೈರ್ಮಲ್ಯದ ಕುರಿತು ತಿಳಿವಳಿಕೆ ಮೂಡಿಸಬೇಕೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

