ಕೋಲಾರ

ಕಾನೂನು ಸೇವಾ ಕ್ಲಿನಿಕ್ ಪ್ರಾರಂಭಿಸಲು ಸಲಹೆ

Published On :

ಕೋಲಾರ: ಕಾಲೇಜುಗಳಲ್ಲಿ ಪಾಠ ಪ್ರವಚನದ ಜತೆಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯವಾಗಿದ್ದು ಇದಕ್ಕಾಗಿ ಕಾನೂನು ಸೇವಾ ಕ್ಲಿನಿಕ್ ಪ್ರಾರಂಭಿಸಲು ಅವಕಾಶಗಳಿವೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ರೇಣುಕಾ ಪ್ರಸಾದ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಮಹಿಳಾ ಕಾಲೇಜು ಹಾಗೂ ಜಾಗೃತಿ ಸೇವಾ ಸಂಸ್ಥೆ ಆಶ್ರಯದಲ್ಲಿ ಗುರುವಾರ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನುಗಳ ಬಗ್ಗೆ ಅರಿವು ಅಗತ್ಯವಾಗಿದೆ ಈ ಹಿನ್ನಲೆಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಪ್ರಾಧಿಕಾರ ಅನುಷ್ಠಾನಕ್ಕೆ ತರುತ್ತಿದ್ದು ಇದನ್ನು ಸದ್ಭಳಿಸಿಕೊಳ್ಳಬೇಕೆಂದರು.
ಕಾನೂನು ಸಲಹಾ ಸೇವೆಗಳಿಗೆ ಹಾಗೂ ಸಣ್ಣಪುಟ್ಟ ವ್ಯಾಜ್ಯಗಳ ಇತ್ಯರ್ಥಕ್ಕೆ ಕಾನೂನು ಸೇವಾ ಕ್ಲಿನಿಕ್ ಪ್ರಾರಂಭಿಸಿ ತರಬೇತಿ ನೀಡಲಾಗುವುದು, ಪ್ರಾಂಶುಪಾಲರು ಅವಕಾಶ ನೀಡಿದಲ್ಲಿ ಈ ಕಾಲೇಜಿನಲ್ಲೂ ಕಾನೂನು ಸೇವಾ ಕ್ಲಿನಿಕ್ ಪ್ರಾರಂಭಿಸಬಹುದಾಗಿದೆ ಎಂದು ತಿಳಿಸಿದರು.
2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಕಿಣಿಕೇರಿ, 1 ನೇ ಅಪರ ಸಿವಿಲ್ನ್ಯಾಯಾದೀಶರಾದ ಕೆಂಗಬಾಲಯ್ಯ ಹೆಣ್ಣು ಮಕ್ಕಳು ಕಾನೂನು ಅರಿವು ಪಡೆದರೆ ಸಿಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಉಪನಿರ್ದೇಶಕಿ ಎ. ಶಕುಂತಲ ಮಾತನಾಡಿ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ನಿಯಂತ್ರಿಸುವ ಜವಾಬ್ದಾರಿಯೂ ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ ಜವಾಬ್ದಾರಿ ನೀಡಿದೆ, ಮಕ್ಕಳ ಬಗ್ಗೆ ರಕ್ಷಣಾಧಿಕಾರಿಗಳನ್ನು ನೇಮಿಸಿದೆ 18ವರ್ಷದ ಒಳಗೆ ಇರುವವರು ಅಪ್ರಾಪ್ತರೆಂದು ಪರಿಗಣಿಸಿದ್ದು, ಮಕ್ಕಳ ಸಹಾಯವಾಣಿ 98 ಮತ್ತು ಮಹಿಳಾ ಸಹಾಯವಾಣಿ 91 ದೂರವಾಣಿಗೆ ಕರೆಮಾಡಬಹುದಾಗಿದೆ ಎಂದರು.
ಡಾ.ಪಿ. ರತ್ನಮ್ಮ, ವಕೀಲ ಸುರೇಂದ್ರ ಕುಮಾರ್ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಎ.ವಿ. ಆನಂದ್, ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಇದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ.ಎಸ್.ವಿ.ನಂದವಾಡಗಿ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.