ಕೋಲಾರ

ಸೆಮಿಸ್ಟರ್ ಪದ್ಧತಿ ವಿರೋಧಿಸಿ ಪ್ರತಿಭಟನೆ

Published On :

ಗುಡಿಬಂಡೆ: ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಪ್ರಸ್ತುತ ವರ್ಷದ ಐಟಿಐ ಕಾಲೇಜುಗಳಲ್ಲಿ ಯಾವುದೇ ಸೂಚನೆಯಿಲ್ಲದೆ ಸೆಮಿಸ್ಟರ್ ಪದ್ಧತಿ ಅಳವಡಿಸಿರುವುದನ್ನು ಖಂಡಿಸಿ ಎಬಿವಿಪಿ ಸಂಘಟನೆ ವತಿಯಿಂದ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡ ಜಿ.ಎ. ಅಮರೇಶ ಕೇಂದ್ರ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ದೇಶದ ಜನತೆಗೆ ಒಂದಲ್ಲ ಒಂದು ರೀತಿ ಅನ್ಯಾಯ ಮಾಡುತ್ತಿದ್ದು, ಈಗ ವಿದ್ಯಾರ್ಥಿಗಳಿಗೂ ಅನ್ಯಾಯ ಮಾಡಲು ಮುಂದಾಗಿರುವುದು ದೇಶದ ದುರ್ಗತಿಯೆಂದೆ ಭಾವಿಸಬೇಕಾಗಿದೆ. ಸದ್ಯ ಐಟಿಐ ಕಾಲೇಜುಗಳಲ್ಲಿ ಸೆಮಿಸ್ಟರ್ ಪದ್ಧತಿಯನ್ನು ಜಾರಿಗೆ ತಂದು ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗುತ್ತಿದೆ. ಆದ್ದರಿಂದ ಈ ಕೂಡಲೇ ಸೆಮಿಸ್ಟರ್ ಪದ್ಧತಿಯನ್ನು ಹಿಂಪಡೆದು ಐಟಿಐ ವಿದ್ಯಾರ್ಥಿಗಳಿಗೆ ಸಹಕಾರಿಯಾಗಬೇಕು. ಇಲ್ಲದ ಪಕ್ಷದಲ್ಲಿ ಸಂಘಟನೆ ವತಿಯಿಂದ ದೇಶವ್ಯಾಪಿ ಉಗ್ರ ಹೋರಾಟ ಕೈಗೊಳ್ಳಬೇಕಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮುಖಂಡರಾದ ನರಸಿಂಹಮೂರ್ತಿ, ಅಮರೇಶ, ಶ್ರೀನಿವಾಸ, ಹರೀಶ್, ನವೀನ್, ವೆಂಕಟೇಶ್ ಸೇರಿದಂತೆ ಹಲವರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.