31 ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಂದ್
ಚಿಂತಾಮಣಿ: ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಜ.31 ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಂದ್ಗೆ ಕರೆ ನೀಡಿರುವುದಾಗಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಂಜನೇಯರೆಡ್ಡಿ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಎಲ್ಲಾ ಪ್ರಗತಿಪರ ಸಂಘಟನೆಗಳು ಹಾಗೂ ವಿವಿಧ ಸ್ವಯಂ ಸ್ರೇವಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಭೆ ಕರೆದು ಜ.31 ರಂದು ಜಿಲ್ಲೆ ಬಂದ್ಗೆ ಕರೆ ನೀಡಿ ಪೂರ್ವಬಾವಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು. ಪರಮಶಿವಯ್ಯ ವರದಿಗೆ ಬದಲಾಗಿ ಸುಳ್ಳು ಭರವಸೆ ನೀಡಿ ಲೋಕಸಭಾ ಚುನಾವಣೆಯಲ್ಲಿ ಮತ ಪಡೆಯಲು ಗಿಮಿಕ್ ರಾಜಕಾರಣವನ್ನು ಇಬ್ಬರು ಕೇಂದ್ರ ಸಚಿವರು ಮಾಡುತ್ತಿದ್ದಾರೆಂದು ಆಂಜನೇಯರೆಡ್ಡಿ ಆರೋಪಿಸಿದರು. ಬಂದ್ಗೆ ನಾಗರಿಕರು ಸಹಕಾರ ನೀಡಿ ಹೋರಾಟಕ್ಕೆ ಮುಂದಾಗಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಭಾಗವಹಿಸಿದ್ದ ರಕ್ಷಣಾ ವೇದಿಕೆ, ರೈತಸಂಘ, ದಲಿತ ಸಂಘರ್ಷ ಸಮಿತಿ, ಕುಂಬಾರರ ಸಂಘ, ಕನ್ನಡಸೇನೆ, ಜಯ ಕರ್ನಾಟಕ, ವಾಲ್ಮೀಕಿ ಸಂಘ, ಕುರುಬರ ಸಂಘ,ಬಲಿಜ ಸಂಘ, ಯಾದವ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

