ಕೋಲಾರ

ಚಿಕ್ಕಬಳ್ಳಾಪುರ ಬಂದ್; ಸಭೆ

Published On :

ಶಿಡ್ಲಘಟ್ಟ: ಪರಮಶಿವಯ್ಯನವರ ವರದಿ ಜಾರಿಗೆ ಒತ್ತಾಯಿಸಿ ಚಿಕ್ಕಬಳ್ಳಾಪುರ ಜಿಲ್ಲೆ ಬಂದ್ಗೆ ಕರೆ ನೀಡಲು ಪೂರ್ವಬಾವಿ ಸಭೆ ಕರೆಯಲಾಗಿತ್ತು. ಪಟ್ಟಣದ ತಾಪಂ ಸಬಾಂಗಣದಲ್ಲಿ ಶಾಶ್ವತ ನೀರಾವರಿ ಹೋರಾಟಕ್ಕಾಗಿ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಎಲ್ಲ ಸಂಘಟನೆಗಳು ಪಾಲ್ಗೂಂಡಿದ್ದರು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಆಂಜನೇಯರೆಡ್ಡಿ, ಸರ್ಕಾರಗಳು ಪರಮಶಿವಯ್ಯ ವರದಿಯನ್ನು ಕಡೆಗಣಿಸುತ್ತಿದ್ದು, ಈ ಭಾಗದ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡು ಪರಮಶಿವಯ್ಯ ವರದಿಯನ್ನು ದಾರಿ ತಪ್ಪಿಸುವತ್ತ ಹುನ್ನಾರ ನಡೆಸುತ್ತಿದ್ದು, ಉಗ್ರ ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ಜಿಲ್ಲಾ ಬಂದ್ಗೆ ಕರೆ ನೀಡಿದ್ದು, ಬಂದ್ ಯಶಸ್ವಿಗೊಳಿಸಲು ಮನವಿ ಮಾಡಿದರು. ಜಿಪಂ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ ಮಾತನಾಡಿದರು. ಅಂತಾರಾಷ್ಟ್ರೀಯ ಕ್ರೀಡಾ ಪಟು ಶ್ರೀನಿವಾಸ್, ಭಕ್ತರ ಹಳ್ಳಿ ಭೈರೇಗೌಡ, ಮಳ್ಳೂರು ಹರೀಶ್, ನರಸಿಂಹಯ್ಯ, ರಾಜಾಕಾಂತ್, ಮೇಲೂರು ಉಮೇಶ್, ಸುಶ್ಮಾ ಶ್ರೀನಿವಾಸ್, ದೊಣ್ಣಹಳ್ಳಿ ರಾಮಣ್ಣ, ಮೇಲೂರು ಮಂಜುನಾಥ್, ವೆಂಕಟರಮಣಪ್ಪ, ವೆಂಕಟಸ್ವಾಮಿ, ರಾಮಚಂದ್ರಪ್ಪ, ಗೋಪಾಲ್, ಎಲುವಳ್ಳಿ ಸೊಣ್ಣೇಗೌಡ, ಪಿ.ವಿ. ನಾಗರಾಜ್, ಹಿತ್ತಲ ಹಳ್ಳಿ ರಮೇಶ್, ಆನೂರು ಬಿ.ನಾರಾಯಣಪ್ಪ, ಹೊಸಪೇಟೆ ಶಶಿಕುಮಾರ್, ತ್ಯಾಗರಾಜು, ನಂಜಪ್ಪ, ಭಾಸ್ಕರ ರೆಡ್ಡಿ ಇದ್ದರು.
ಬಸ್ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ಶಿಡ್ಲಘಟ್ಟ: ತಾಲೂಕಿನ ಜಂಗಮಕೋಟೆ ಕ್ರಾಸ್ಗೆ ಶಾಲ ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಹೋಗಲು ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಪ್ರತತಿಭಟನೆ ನಡೆಸಲಾಯಿತು. ಜಂಗಕೋಟೆ ಸುತ್ತ ಮುತ್ತಲಿನ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಹೋಗಲು ಸಮರ್ಪಕ ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು ಹಲವು ಬಾರಿ ಮನವಿ ನೀಡಿದರೂ ಪ್ರಯೋಜನವಿಲ್ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪಿಎಸ್ಐ ಹನುಮಂತಪ್ಪ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಬರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಿಲ್ಲಿಸಿದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.