ಕೋಲಾರ

ಸ್ವಾತಂತ್ರ್ಯ ಹೋರಾಟದಲ್ಲಿ ಅಗ್ರ ಸ್ಥಾನ ಪಡೆದ ನೇತಾಜಿ

Published On :

ಗುಡಿಬಂಡೆ: ಭಾರತ ಮಾತೆಯನ್ನು ದಾಸ್ಯದ ಸಂಕೋಲೆಗಳಿಂದ ಪಾರು ಮಾಡಲು ತಮ್ಮ ಜೀವನವನ್ನೇ ತ್ಯಾಗ ಮಾಡಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಅಗ್ರ ಸ್ಥಾನ ಪಡೆದ ವ್ಯಕ್ತಿ ಸುಭಾಷ್ ಚಂದ್ರಬೋಸರು ಎಂದು ತಾಲೂಕಿನ ಸಿರಿಗನ್ನಡ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಎನ್. ರಾಮಮೂರ್ತಿ ಅಭಿಪ್ರಾಯಪಟ್ಟರು.
ಪಟ್ಟಣದ ನ್ಯೂ ಪಬ್ಲಿಕ್ ಶಾಲೆಯಲ್ಲಿ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಿ.ಎನ್. ರಾಜಶೇಖರ್, ಭಾರತಕ್ಕೆ ಸ್ವಾತಂತ್ರ್ಯ ಗಳಿಸಿಕೊಡುವ ಉದ್ದೇಶದಿಂದ ಜರ್ಮಿನಿ ಸರ್ಕಾರದ ಸಹಾಯ ಪಡೆದು, ವಿದೇಶಗಳಲ್ಲಿನ ಭಾರತೀಯರನ್ನು ಒಂದುಗೂಡಿಸಿ ಐಎನ್ಎ ಸೈನ್ಯ ಕಟ್ಟಿದ್ದರು ಎಂದರು. ಉಪನ್ಯಾಸಕ ಎಸ್.ಎಂ. ಕೃಷ್ಣಮೂರ್ತಿ, ಮುಖ್ಯ ಶಿಕ್ಷಕ ಮನೋಹರ್ ಮಾತನಾದರು. ನ್ಯೂ ಪಬ್ಲಿಕ್ ಶಾಲೆಯ ಮಕ್ಕಳು ಕವನಗಳ ರಚನೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.