ಕೋಲಾರ

ಪ್ರತಿ ಹೋಬಳಿಗೂ ವಸತಿ ಶಾಲೆ

Published On :

ಚಿಂತಾಮಣಿ: ಗ್ರಾಮೀಣ ಜನರಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರತಿ ಹೋಬಳಿಗೆ ಒಂದರಂತೆ ವಸತಿ ಶಾಲೆ ತೆರೆಯಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ 200 ಕ್ಕೂ ಹೆಚ್ಚು ವಸತಿ ಶಾಲೆಗಳನ್ನು ತೆರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿಸಿರುವುದರಿಂದ ಗ್ರಾಮೀಣ ಪ್ರದೇಶದ ಪ್ರತಿ ಹೋಬಳಿಗೆ ಒಂದರಂತೆ ವಸತಿ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಬದ್ದವಾಗಿದೆ. ಇದಕ್ಕೆ ಅನುದಾನವೂ ಬಿಡುಗಡೆಯಾಗಿದೆ ಎಂದು ಹೇಳಿದರು.
ವಾಲ್ಮೀಕಿ ಭವನ ನಿರ್ಮಾಣಕ್ಕೆ 1 ಕೋಟಿ; ತಾಲೂಕಿನಲ್ಲಿ ಪರಿಶಿಷ್ಟ ವರ್ಗದ ಜನರ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯ ಅನುದಾನ 1 ಕೋಟಿ ರು. ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಸರ್ಕಾರಿ ಜಾಗ ಗುರ್ತಿಸಿ ಭವನ ನಿರ್ಮಾಣ ಮಾಡಲು ಶೀಘ್ರವೇ ಗುದ್ದಲಿ ಪೂಜೆ ನೆರವೇರಿಸಲು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಸಮಕ್ಷದಲ್ಲಿ ಚಾಲನೆ ನೀಡಲಾಗುವುದೆಂದು ಆಂಜನೇಯ ಭರವಸೆ ನೀಡಿದರು.
ವಿವಿಧ ಹಳ್ಳಿಗಳಲ್ಲಿ ಸಮುದಾಯ ಭವನ: ತಾಲೂಕಿನ ಮುಂಗಾನಹಳ್ಳಿ, ಚಿಲಕಲನೇರ್ಪು, ಬುರುಡಗುಂಟೆ, ಅಂಬಾಜಿದುರ್ಗ, ಪಾಪದಿಮ್ಮನಹಳ್ಳಿಗಳಲ್ಲಿ 10 ಲಕ್ಷ ರುಪಾಯಿ ವೆಚ್ಚದಲ್ಲಿ ಅಂಬೇಡ್ಕರ್ ಹಾಗೂ ಡಾ. ಜಗಜೀವನರಾಮ್ ಸಮುದಾಯ ಭವನಗಳನ್ನು ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಿರುವುದಾಗಿ ಹೇಳಿದರು.
ಉತ್ತಮ ಗುಣ ಮಟ್ಟದ ಶಿಕ್ಷಣ ಪಡೆಯಲು ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳನ್ನು ಗುರ್ತಿಸಿ ಪ್ರೋತ್ಸಾಹ ಧನ, ಇತರೆ ಸೌಲತ್ತುಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.