ರೋಗಿಯ ಆರೋಗ್ಯ ನಿರ್ಲಕ್ಷಿಸಿಲ್ಲ
ಕೋಲಾರ: ನಮ್ಮ ಆಸ್ಪತ್ರೆಯಲ್ಲಿ ಮಾನವೀಯತೆ ಇದೆ, ಸಮಾಜ ಸೇವೆಯನ್ನು ಬದ್ಧತೆಯಿಂದ ನೆರವೇರಿಸುತ್ತಿದ್ದೇವೆ. ಕೆಲವರು ಆಸ್ಪತ್ರೆಗೆ ಕೆಟ್ಟ ಹೆಸರು ತರಲು ಗೊಂದಲ ಸೃಷ್ಟಿಸುತ್ತಿದ್ದಾರೆಂದು ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಅಧ್ಯಕ್ಷ ಆರ್.ಎಲ್. ಜಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಳಬಾಗಿಲು ತಾಲೂಕಿನ ಕೋಣನಕುಂಟೆ ಗ್ರಾಮದ ಗಂಗರಾಜು ಎಂಬವರು ಜ.18ರಂದು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ನಮ್ಮ ಆಸ್ಪತ್ರೆಗೆ ದಾಖಲು ಆಗಿದ್ದರೆ, ರೋಗಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ, ಆಸ್ಪತ್ಪೆಗೆ ಸೇರುವಾಗ ರೋಗಿಯ ಬಳಿ ನಯಾ ಪೈಸೆ ಇರಲಿಲ್ಲ, ಮಾನವೀಯ ದೃಷ್ಟಿಯಿಂದ ಹಣ ಪಡೆಯದೆ ಚಿಕಿತ್ಸೆ ನೀಡಲಾಗಿದೆ. ಆದರೆ, ಕೆಲವರು ಮೂರು ದಿನಗಳ ಹಿಂದೆ ಆಸ್ಪತ್ರೆಯ ಬಳಿ ಪ್ರತಿಭಟನೆ ನಡೆಸಿದ್ದಾರೆಂದು ದೂರಿದರು. ಕಾರಣ ತಿಳಿಸದೆ ಪ್ರತಿಭಟನೆ ನಡೆಸಿದ್ದಾರೆ, ಸತ್ಯ ತಿಳಿಯದೆ ಆಸ್ಪತ್ರೆಯ ವಿರುದ್ಧ ಜನತೆ ತಪ್ಪು ತಿಳಿಯುವಂತೆ ಮಾಡಿದ್ದಾರೆಂದು ಕಿಡಿಕಾರಿದರು.
ರೈತರು ಪಡೆದ ಸಾಲ ಮರುಪಾವತಿ ಮಾಡಿ
ಶಿಡ್ಲಘಟ್ಟ: ಬ್ಯಾಂಕ್ಗಳಲ್ಲಿ ಸಾಲ ಪಡೆದು ಮರುಪಾವತಿ ಮಾಡಿದರೆ ಮಾತ್ರ ಬೇರೆಯವರಿಗೆ ಸಾಲ ಕೊಡಲು ಸಾಧ್ಯ ಎಂದು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ಪಟ್ಟಣದ ನೆಹರೂ ಕ್ರೀಡಾಂಗಣದಲ್ಲಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಸಾಲ ವಿತರಣಾ ಹಾಗೂ ಗೊರಮಡುಗು ಗ್ರಾಮ ದತ್ತು ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ದೇಶದ ಪ್ರಗತಿಯಾಗಬೇಕಾದರೆ ಕೈಗಾರಿಕೆಗಳು ಅಬಿವೃದ್ಧಿಯಾಗಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಉಪಯೋಗಿಸಿಕೊಂಡು ಬಡವರು ಮುಂದೆ ಬರಬೇಕು, ಶಿಡ್ಲಘಟ್ಟದಲ್ಲಿ ವಾಲ್ಮೀಕಿ ಭವನ, ಚಿಂತಾಮಣಿಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕಾಗಿ ತಲಾ ಒಂದು ಕೋಟಿ, ತಲಕಾಯಲ ಬೆಟ್ಟದಲ್ಲಿ ವಾಲ್ಮೀಕಿ ಭವನಕ್ಕಾಗಿ 50 ಲಕ್ಷ ಅನುದಾನ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

