ಕೋಲಾರ

ಸ್ಕೌಟ್ಸ್ನಿಂದ ವಿದ್ಯಾರ್ಥಿಗಳು ಶಿಸ್ತು ಕಲಿಯುತ್ತಾರೆ

Published On :

ಚಿಕ್ಕಬಳ್ಳಾಪುರ: ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು ಸಂಯಮ, ನಾಯಕತ್ವ, ದೇಶಪ್ರೇಮ, ಸೇವಾ ಮನೋಭಾವ ಸೇರಿದಂತೆ ಒಳ್ಳೆಯ ಗುಣಗಳನ್ನು ಬೆಳೆಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಪಂಚಗಿರಿ ವಿದ್ಯಾದತ್ತಿಯ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ತಿಳಿಸಿದರು. ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು ಮತ್ತು ಸೇವಾ ಮನೋಭಾವನೆ ಬೆಳೆಸಲು ಪ್ರಮುಖ ಆದ್ಯತೆ ನೀಡಬೇಕು. ಆಗ ಮಾತ್ರ ಒಳ್ಳೆಯ ವ್ಯಕ್ತಿತ್ವದ ಜನರನ್ನು ರೂಪಿಸಲು ಸಾಧ್ಯ ಎಂದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಕೇಂದ್ರ ಸ್ಥಾನಿಕ ಆಯುಕ್ತ ಎನ್. ಶ್ರೀನಿವಾಸ್ ಮಾತನಾಡಿದರು.



 ನೂತನ ರೈಲು ವಿಸ್ತರಣೆಗೆ ಮನವಿ


ಬಂಗಾರಪೇಟೆ: ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ಬರುವ ನೂತನ ರೈಲನ್ನು ಪಟ್ಟಣದವರೆಗೂ ವಿಸ್ತರಿಸುವಂತೆ ರೇಲ್ವೆ ವಿಭಾಗದ ಪ್ರಾದೇಶಿಕ ವ್ಯವಸ್ಥಾಪಕರಲ್ಲಿ ಮನವಿ ಮಾಡಿದ್ದು ಅವರು ವಿಸ್ತರಣೆಗೆ ಒಪ್ಪಿದ್ದಾರೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಪ್ರಾದೇಶಿಕ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ, ಪಟ್ಟಣದಿಂದ ಪ್ರತಿದಿನ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ ಹೋಗಿ ಬರುವರಿದ್ದು, ಇಷ್ಟುಮಂದಿಗೆ ಇರುವ ರೈಲುಗಳ ಸಂಖ್ಯೆ ತೀರ ಕಡಿಮೆಯಾಗಿವೆ. ಮತ್ತಷ್ಟು ರೈಲುಗಳನ್ನು ವಿಸ್ತರಿಸಬೇಕು ಅದಕ್ಕೂ ಮೊದಲು ಚಿಕ್ಕಬಳ್ಳಾಪುರದಿಂದ ಕೋಲಾರದವರೆಗೂ ಸಂಚರಿಸುವ ರೈಲನ್ನು ಪಟ್ಟಣದವರೆಗೂ ವಿಸ್ತರಿಸಿ ನಂತರ ಬೆಂಗಳೂರಿಗೆ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಡಿದ ಮನವಿಗೆ ಸ್ಪಂದಿಸಿರುವ ಅಧಿಕಾರಿ ಎರಡು ತಿಂಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ತಿಳಿಸಿದ್ದಾರೆಂದು ಶಾಸಕರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.