ಕೋಲಾರ

ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾಮಾಜಿಕ ನ್ಯಾಯ

Published On :

ಬಾಗೇಪಲ್ಲಿ: ರಾಜಕೀಯ ಪಕ್ಷಗಳಲ್ಲಿ ಬೇಧಭಾವವಿಲ್ಲದೆ ಪ್ರತಿಯೊಬ್ಬರಿಗೂ ಅಧಿಕಾರ ಸಿಗುವುದು ಕೇವಲ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಎಂದು ಮಾಜಿ ಶಾಸಕ ಎನ್. ಸಂಪಂಗಿ ತಿಳಿಸಿದರು. ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಬಾಗೇಪಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಒಗಟ್ಟಿನಿಂದ ಶ್ರಮಿಸಿದಾಗ ಮುಂದಿನ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿವೀರಪ್ಪ ಮೊಯಿಲಿಯವರನ್ನು ಸುಲಭವಾಗಿ ಗೆಲ್ಲಿಸಲು ಸಾಧ್ಯವಾಗುತ್ತದೆ ಎಂದರು. ಚುನಾವಣಾ ಸಮಯದಲ್ಲಿ ಮಾತ್ರ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಕೂಗಾಡುವ ಹಾಗೂ ಚುನಾವಣೆಯ ನಂತರ ಮೌನಕ್ಕೆ ಶರಣಾಗುತ್ತಾರೆ ಎಂದು ರಾಜಕೀಯ ವಿರೋಧಿಗಳನ್ನು ತರಾಟೆಗೆ ತೆಗೆದುಕೊಂಡರು. ನಾರಾಯಣಸ್ವಾಮಿ, ಯೋಗೀಶ್ವರೀ, ಎಂ.ವಿ. ಕೃಷ್ಣಪ್ಪ ಇದ್ದರು.

 ಭೂ ಒತ್ತುವರಿ ವಿರುದ್ಧ
ಬೃಹತ್ ರ್ಯಾಲಿ


ಗೌರಿಬಿದನೂರು: ತಾಲೂಕಿನಲ್ಲಿ ಸರ್ಕಾರಿ ಭೂಮಿ, ದಲಿತರ ಹಾಗೂ ವಕ್ಫ್ ಬೋರ್ಡ್ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ರಾಜ್ಯ ಪ್ರಜಾ ವಿಮೋಚನಾ ಸಮಿತಿ ರಾಜ್ಯಾಧ್ಯಕ್ಷ ಕಾಸೀಂ ಸಾಬಬ್ ಒತ್ತಾಯಿಸಿದರು. ರಾಜ್ಯ ಪ್ರಜಾ ವಿಮೋಚನಾ ಸಮಿತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿ, ಸರ್ಕಾರದ ವರದಿಯಂತೆ ರಾಜ್ಯದಲ್ಲಿ ಹನ್ನೆರಡು ಲಕ್ಷ ಎಕರೆ ಭೂಮಿ ಅಕ್ರಮವಾಗಿ ಒತ್ತುವರಿಯಾಗಿದೆ. ಈ ನಿಟ್ಟಿನಲ್ಲಿ ಭೂ ನ್ಯಾಯ ಮಂಡಳಿಯ ಪಿಟಿಸಿಎಲಲ್ ಕಾಯ್ದೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಒತ್ತಾಯಿಸಿದರು. ಒತ್ತುವರಿ ಮುಖಾಂತರ  ಕೋಟ್ಯಂತರ ರು. ಗುಳುಂ ಆಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತ ಪಡಿಸಿದರು.


 ಉಳ್ಳವರು ಸರ್ಕಾರಿ
ಶಾಲೆಗಳಿಗೆ ನೆರವು ನೀಡಿ


ಚಿಕ್ಕಬಳ್ಳಾಪುರ: ಬಡ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲು ಉಳ್ಳವರು ಅಗತ್ಯವಿರುವ ನೆರವನ್ನು ನೀಡಿ ಪ್ರೋತ್ಸಾಹಿಸಬೇಕೆಂದು ಕೆಎಂಎಫ್ ನಿರ್ದೇಶಕ ಕೆ.ವಿ.ನಾಗರಾಜ್ ಸಲಹೆ ನೀಡಿದರು. ತಾಲೂಕಿನ ಕಣಜೇನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದಿವಂಗತ ಛೇರ್ಮನ್ ಕೆ.ಎನ್. ವೆಂಕಟಪ್ಪನವರ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ಪುಸ್ತಕಗಳ ವಿತರಿಸಿ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲೂ ಉತ್ತಮ ಆರೋಗ್ಯದ ಜೊತೆಗೆ ಶಿಕ್ಷಣ ಅಗತ್ಯವಾಗಿ ಬೇಕು. ಈ ಹಿನ್ನೆಲೆಯಲ್ಲಿ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಕಂಠ ಮಾತನಾಡಿದರು. ನಾಗರಾಜ್, ಬಿಆರ್ಸಿ ನರಸಿಂಹಮೂರ್ತಿ, ಲಕ್ಷ್ಮೀನಾರಾಯಣ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.