ಜನತೆಗೆ ಸಂಚಾರಿ ನಿಯಮಗಳ ಜಾಗೃತಿ ಅವಶ್ಯ: ಶಿವಕುಮಾರ್
ಗುಡಿಬಂಡೆ: ವಾಹನ ಸವಾರರಿಗೆ ಸಂಚಾರಿ ನಿಯಮಗಳ ತಿಳುವಳಿಕೆ ಕೊರತೆಯಿಂದಲೇ ಅನೇಕ ಅಪಘಾತಗಳು ಸಂಭವಿಸುತ್ತಿವೆ. ಜನತೆ ಸಂಚಾರಿ ನಿಯಮಗಳ ಕುರಿತು ಜಾಗೃತಿ ಪಡೆದಲ್ಲಿ ಅಪಘಾತಗಳನ್ನು ತಡೆಗಟ್ಟಬಹುದು ಎಂದು ಆರಕ್ಷಕ ವೃತ್ತ ನಿರೀಕ್ಷಕ ಶಿವಕುಮಾರ್ ತಿಳಿಸಿದರು. ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಶಾಲೆಯ ಮಕ್ಕಳಿಗೆ ಸಂಚಾರಿ ನಿಯಮಗಳನ್ನು ಮನವರಿಕೆ ಮಾಡಿದರು. ಸರ್ಕಾರ ಬಡ ಮಕ್ಕಳಿಗಾಗಿ ಉಚಿತವಾಗಿ ಸೈಕಲ್ ವಿತರಿಸಲಾಗಿದೆ. ಸೈಕಲ್ ಪಡೆದ ವಿದ್ಯಾರ್ಥಿಗಳು ಬೇರೆ ರೀತಿಯಲ್ಲಿ ಉಪಯೋಗಿಸುತ್ತಿರುವುದು ಸರಿಯಲ್ಲ. ಸದ್ಬಳಕೆ ಮಾಡಿಕೊಳ್ಳಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.
ಚಿಕ್ಕಬಳ್ಳಾಪುರದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ
ಚಿಕ್ಕಬಳ್ಳಾಪುರ: ನಗರದ ಸಿಟಿಜನ್ ಕ್ಲಬ್ ಆವರಣದಲ್ಲಿ ಜಿಲ್ಲಾ ಪೊಲೀಸ್, ಲಯನ್ಸ್ ಕ್ಲಬ್, ಸೌಮ್ಯ ಕಣ್ಣಿನ ಆಸ್ಪತ್ರೆ ಆಶ್ರಯದಲ್ಲಿ 25 ನೇ ರಸ್ತೆ ಸುರಕ್ಷತಾ ಸಪ್ತಾಹ-2014 ರ ಅಂಗವಾಗಿ ಉಚಿತ ನೇತ್ರಾ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಲಯನ್ಸ್ ಸಂಸ್ಥೆಯ ಅಧ್ಯಕ್ಷ ಭದ್ರಚಲಾಂ ಮಾತನಾಡಿ, ಮನುಷ್ಯನಿಗೆ ಕಣ್ಣು ಕಾಣದಂತಾದರೆ ತನ್ನ ಭಾವನೆಯೂ ಬದಲಾಗುತ್ತದೆ. ಕಣ್ಣು ಕಳೆದುಕೊಂಡರೆ ಸಮಾಜವನ್ನು ನೋಡಲು ಸಾಧ್ಯವಿಲ್ಲ, ಎಷ್ಟೋ ಮಂದಿ ಸ್ವಯಂಕೃತ ಅಪರಾಧಗಳಿಂದ ಕಣ್ಣು ಕಳೆದುಕೊಳ್ಳುತ್ತಿದ್ದಾರೆ ಎಂದ ಅವರು, ಚಾಲಕರು ಕೆಲಸದ ಒತ್ತಡದಲ್ಲಿ ಆರೋಗ್ಯದ ಕಡೆ ಗಮನಹರಿಸುವುದಿಲ್ಲ. ಆದರೆ, ಈ ಭಾವನೆಯನ್ನು ಬಿಡಬೇಕು. ಆಗಾಗ ತಮ್ಮ ಆರೋಗ್ಯದ ತಪಾಸಣೆ ಮಾಡಿಸಿಕೊಳ್ಳಬೇಕೆಂದರು. ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ ಪೆಕ್ಟರ್ ಮಂಜುನಾಥ್ ಮಾತನಾಡಿದರು. ಕಣ್ಣಿನ ತಜ್ಞ ಜಯರಾಮರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

