ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ
ಮಾಲೂರು: ಕರ್ನಾಟಕ ಕಂಡ ಅಪ್ರತಿಮ ಸಾಹಸಿಗರಲ್ಲಿ ಸಂಗೊಳ್ಳಿ ರಾಯಣ್ಣ ಮುಂಚೂಣಿಯಲ್ಲಿದ್ದಾರೆ ಎಂದು ರಾಜ್ಯ ಕುರುಬರ ಸಂಘದ ನಿರ್ದೇಶಕ ಅಂಜನಿ ಸೋಮಣ್ಣ ಹೇಳಿದರು.
ಸ್ಥಳೀಯ ಕನಕ ಯುವ ಸೇನೆ ಸಂಗೂಳ್ಳಿ ರಾಯಣ್ಣ ಹುತಾತ್ಮ ದಿನದ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ವಿವಿಧ ಸಾರ್ವಜನಿಕ ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಆಡಳಿತದಲ್ಲಿ ನಂಬಿಕಸ್ತ ಸಿಪಾಯಿಯಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಸಂಗೂಳ್ಳಿ ರಾಯಣ್ಣರವರ ಕೆಚ್ಚು ಇಂದಿನ ಯುವಕರಿಗೆ ಮಾದರಿಯಾಗಬೇಕಾಗಿದೆ ಎಂದರು.
ಉಶೋಕ್ ಮಾತನಾಡಿ, ಸಂಗೂಳ್ಳಿ ರಾಯಣ್ಣ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಭಯೋತ್ಪಾದನೆಯನ್ನು ದೇಶದಿಂದ ಹೂರಗಟ್ಟಲು ಸಾಧ್ಯ ಎಂದರು. ವೇದಿಕೆಯ ಅಧ್ಯಕ್ಷ ತಿ. ದೇವರಾಜ್ ಮಾತನಾಡಿದರು. ಕಾರ್ಯಕ್ರಮದ ನಂತರ ಸರ್ಕಾರಿ ಆಸ್ವತ್ರೆಯ ರೋಗಿಗಳಿಗೆ ಬ್ರೆಡ್-ಹಣ್ಣು ವಿತರಿಸದರು. ಪಟ್ಟಣದ ಕಾರಂಜಿ ಬಡಾವಣೆಯಲ್ಲಿ ಸಂಗೂಳ್ಳಿ ರಾಯಣ್ಣ ಹುತಾತ್ಮದಿನದ ಅಂಗವಾಗಿ ಬೆಂಗಳೂರಿನ ಕಂಪೇಗೌಡ ಮೆಡಿಕಲ್ ಸರ್ವಿಸ್ ಸಹಕಾರದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಬಾಟಲು ರಕ್ತ ಸಂಗ್ರಹಿಸಲಾಯಿತು. ಎಂ.ವಿ. ಹನುಮಂತಯ್ಯ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಕನಕ ಯುವ ಸೇನೆಯ ಅಧ್ಯಕ್ಷ ಎಂ.ಕೆ. ರವಿಚಂದ್ರ ಅಧ್ಯಕ್ಷತೆ ವಹಿಸಿದ್ದರು. ಎಟ್ಟುಕೋಡಿ ವೀರಭದ್ರಪ್ಪ, ಎಂ.ಎಸ್. ಸುಬ್ರಮಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

