ಅಭಿವೃದ್ಧಿ ಕೆಲಸದ ಮೇಲೆ ಗಮನವಿಡಿ: ರಾಜಣ್ಣ
ಶಿಡ್ಲಘಟ್ಟ: ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುವಾಗ ಗ್ರಾಮಸ್ಥರು ಗುಣಮಟ್ಟದ ಬಗ್ಗೆ ನೋಡಿಕೊಳ್ಳಬೇಕು ಮತ್ತು ಹೆಚ್ಚು ಕಾಲ ಬಾಳಿಕೆ ಬರುವಂತೆ ಕಾಪಾಡಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲೂಕಿನ ಚೌಡಸಂದ್ರ ಗ್ರಾಮದಲ್ಲಿ ಸೋಮವಾರ ಗ್ರಾಮದ ಗಂಗಮ್ಮ ದೇವಾಲಯದ ಬಳಿ 5 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಪರಿಶಿಷ್ಟ ಜನಾಂಗದ ಕಾಲೋನಿಯ ಅಭಿವೃದ್ಧಿಯ ಕಾಮಗಾರಿಗಳಲ್ಲಿ ಕಾಂಕ್ರಿಟ್ ರಸ್ತೆಯನ್ನು ನಿರ್ಮಿಸುತ್ತಿರುವುದಾಗಿ ಹೇಳಿದರು.
ಗ್ರಾಪಂ ಅಧ್ಯಕ್ಷೆ ಮುನಿರತ್ನಮ್ಮ ತಿರುಮಳೇಶ್, ಸದಸ್ಯರಾದ ರಾಮಚಂದ್ರಪ್ಪ, ರೂಪೇಶ್, ಮಾಜಿ ಸದಸ್ಯರಾದ ಚಂದ್ರಶೇಖರ್, ವೆಂಕಟೇಶ್, ಎಂಪಿಸಿಎಸ್ ಅಧ್ಯಕ್ಷ ನಾರಾಯಣಸ್ವಾಮಿ, ಸದಸ್ಯ ಅಶ್ವತ್ಥಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

