ಕೋಲಾರದಲ್ಲಿ ಹೋರಾಟ ಸಮಿತಿ ಪ್ರತಿಭಟನೆ
ಕೋಲಾರ: ಡಾ.ಪರಮಶಿವಯ್ಯ ವರದಿ ಆಧಾರಿತ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಕೋಲಾರ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿಯು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದ ಪ್ರತಿಭಟನಾಕಾರರು ಸರ್ಕಾರದಿಂದ ಸ್ಪಷ್ಟ ಭರವಸೆ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲವೆಂದು ಪಟ್ಟು ಹಿಡಿದರು.
ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಹಾಗೂ ಶಾಸಕ ರಮೇಶ್ ಕುಮಾರ್ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ, ಎತ್ತಿನ ಹೊಳೆ ಯೋಜನೆ ಜಾರಿಯಿಂದ ಕೋಲಾರ ಜಿಲ್ಲೆಯ ಜನರಿಗೆ ಯಾವುದೇ ಪ್ರಯೋಜನವಾಗದು, ರಾಜ್ಯ ಸರ್ಕಾರ ಡಾ.ಪರಮಶಿವಯ್ಯ ವರದಿ ಜಾರಿಗೆ ಆಸಕ್ತಿ ತೋರುತ್ತಿಲ್ಲವೆಂದು ನಗರಸಭೆ ಸದಸ್ಯ ಮುರಳಿಗೌಡ, ಗಾಂಧಿನಗರ ನಾರಾಯಣಸ್ವಾಮಿ, ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಜಿ.ಪ್ರಭಾಕರ್, ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ವಿ. ಗೀತಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಸೂರ್ಯನಾರಾಯಣ ಆರೋಪಿಸಿದರು.
ಪೊಲೀಸರು ಎಷ್ಟೇ ಮನವೊಲಿಸಿದರು ಧರಣಿ ಹಿಂದಕ್ಕೆ ಪಡೆಯದಿದ್ದರಿಂದ ಪೊಲೀಸರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕುಳಿತಿದ್ದ ಪ್ರತಿಭಟನಾಕಾರರನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ ಗಲ್ ಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆ ಮಾಡಿದರು. ನಗರಸಭೆಯ ಸದಸ್ಯರಾದ ನಾರಾಯಣಮ್ಮ, ಸೋಮಶೇಖರ್, ನಜೀಮ್, ಆಸ್ಲಾಂ ಪಾಷ, ಟಮಕ ವೆಂಕಟೇಶ್, ಮಂಜುನಾಥ್, ರಾಧಾಕೃಷ್ಣ, ನಿಸಾರ್, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆಂಬೋಡಿ ನಾರಾಯಣಸ್ವಾಮಿ ಮತ್ತಿತರ ಸಂಘಟನೆಗಳ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

