ಕೋಲಾರ

ಫಲಪುಷ್ಪ ಪ್ರದರ್ಶನ ಮುಕ್ತಾಯ

Published On :

ಚಿಕ್ಕಬಳ್ಳಾಪುರ: ತಾಲೂಕಿನ ನಂದಿ ಕ್ರಾಸ್‌ನಲ್ಲಿ ಆಯೋಜಿಸಿದ್ದ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಮತ್ತು ಕೃಷಿ ಮಾಹಿತಿ ಆಂದೋಲನ ಯಶಸ್ವಿಯಾಗಿ ಮುಕ್ತಾಯವನ್ನು ಕಂಡಿತು.
ಜಿಲ್ಲೆಯ ವಿವಿಧ ತಾಲೂಕುಗಳು ಮಾತ್ರವಲ್ಲದೇ ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಗಡಿ ಭಾಗ ಆಂಧ್ರದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಫಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಿ ಮಾಹಿತಿ ಪಡೆದರು. ರೈತರಿಗಾಗಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂವಾದ, ಚರ್ಚಾ ಕಾರ್ಯಕ್ರಮಗಳು ನಡೆದವಲ್ಲದೇ ಪ್ರಗತಿಪರ ರೈತರು ತಮ್ಮ ಅನುಭವ ಹಂಚಿಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಲ್ಲಿ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಂಡರು. ಕೃಷಿ, ಮೀನುಗಾರಿಕೆ, ಪಶು, ತೋಟಗಾರಿಕೆ ಇಲಾಖೆ, ಖಾಸಗೀ ಕಂಪನಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ತೆರೆದಿದ್ದ ವಿವಿಧ ಮಳಿಗೆಗಳಲ್ಲಿ ಆಧುನಿಕ ಯಂತ್ರೋಪಕರಣಗಳ ಪರಿಚಯ ಮಾಡಿಕೊಡಲಾಯಿತು.
ಜ.26 ರಂದು ಮಧ್ಯಾಹ್ನ 12 ಗಂಟೆಗೆ ಶಾಸಕ ಡಾ. ಕೆ. ಸುಧಾಕರ್ ಮತ್ತು ಜಿಪಂ ಅಧ್ಯಕ್ಷ ಎಸ್.ಎನ್. ಚಿನ್ನಪ್ಪರವರಿಂದ ಉದ್ಘಾಟನೆಯಾದ ಫಲಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ನೇತೃತ್ವದಲ್ಲಿ ಜ.28 ರಂದು ಸಂಜೆ ನಡೆಯಿತು.
ಕಾಲ ಬದಲಾದಂತೆ ಹೊಸ ತಂತ್ರಜ್ಞಾನ ಬೆಳಕಿಗೆ ಬರುತ್ತಿರುವುದನ್ನು ತಿಳಿದುಕೊಂಡು ಅನ್ವಯಿಸಿಕೊಳ್ಳುವುದರ ಮೂಲಕ ಅಭಿವೃದ್ಧಿ ಸಾಧಿಸಬೇಕೆಂದು ನೀಲಾ ಮಂಜುನಾಥ್ ರೈತರಿಗೆ ಸಲಹೆ ನೀಡಿದರು. ಪರಿಸರವನ್ನು ರಕ್ಷಿಸುವ ಜವಾಬ್ದಾರಿಯು ನಮ್ಮೆಲ್ಲರ ಮೇಲಿದೆ. ಪರಿಸರವಿಲ್ಲದೇ ನಾವಿಲ್ಲ ಎನ್ನುವುದನ್ನು ಎಲ್ಲರೂ ಅರಿತುಕೊಂಡು ಜೀವನ ನಡೆಸಬೇಕಾಗಿದೆ. ಇಲ್ಲದಿದ್ದಲ್ಲಿ ಮುಂದೆ ನಾವೇ ತೊಂದರೆಯನ್ನು ಅನುಭವಿಸಬೇಕಾಗುತ್ತದೆ ಎಂದರು.
ತಾಪಂ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿದರು. ಗಾಯಿತ್ರಿ, ವ್ಯವಸಾಯ ಇಲಾಖೆ ಜಂಟಿ ನಿರ್ದೇಶಕ ರಾಮದಾಸ್, ಕೃಷಿ ವಿಜ್ಞಾನ ಕೇಂದ್ರದ ಡಾ. ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.