ಯುವ ಕಾಂಗ್ರೆಸ್ಸಿಂದ ಆರ್ಟಿಇ ಕುರಿತು ಜಾಗೃತಿ ಜಾಥಾ
ಕೋಲಾರ: ಕೇಂದ್ರದಲ್ಲಿನ ಯುಪಿಎ ಸರ್ಕಾರ ಬಡ ಮಕ್ಕಳಿಗಾಗಿ ಜಾರಿಗೆ ತಂದಿರುವ ಶಿಕ್ಷಣ ಹಕ್ಕು ಜಾರಿ (ಆರ್.ಟಿ.ಇ) ಸಂಬಂಧವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಂಗಳವಾರ ಕೋಲಾರ ಲೋಕಸಭಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಾಥಾ ಆರಂಭಕ್ಕೆ ಮುನ್ನ ಯುವ ಕಾಂಗ್ರೆಸ್ ಮುಖಂಡರು ನಗರದ ಗಾಂಧಿವನದಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ನಗರದ ಪ್ರಮುಖ ಬೀದಿಗಳಾದ ದೊಡ್ಡಪೇಟೆ, ಕಾಲೇಜು ವೃತ್ತ, ಅಮ್ಮವಾರಿಪೇಟೆ, ಹಳೆ ಬಸ್ನಿಲ್ದಾಣ, ಸಾರಿಗೆ ಸಂಸ್ಥೆ ಬಸ್ ನಿಲ್ದಾಣ, ಕ್ಲಾಕ್ಟವರ್ನಲ್ಲಿ ಜಾಥಾ ನಡೆಯಿತು. ಕೇಂದ್ರದ ಯುಪಿಎ ಸರ್ಕಾರದ ಜನಪ್ರಿಯ ಯೋಜನೆಯಾದ ಕಡ್ಡಾಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಮಾಹಿತಿಯುಳ್ಳ ಆಕರ್ಷಕವಾದ ಫ್ಲೆಕ್ಸ್ಗಳನ್ನು ವಾಹನಗಳ ಮೇಲೆ ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಮೃತ್ ರಾಜ್ ಮಾತನಾಡಿ, ಕೇಂದ್ರದಲ್ಲಿ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ರಚನೆ ಆಗಿರುವ ಯುಪಿಎ ಸರ್ಕಾರ ಬಡ ಮಕ್ಕಳ ಕಡ್ಡಾಯ ವಿದ್ಯಾಭ್ಯಾಸಕ್ಕಾಗಿ ಆರ್.ಟಿ.ಎ ಜಾರಿಗೆ ತಂದಿದೆ.
ಈ ಯೋಜನೆ ರಾಷ್ಟ್ರದ ಎಲ್ಲೆಡೆ ಯಶಸ್ವಿಯಾಗಿ ನಡೆಯಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಉಪಾಧ್ಯಕ್ಷರಾದ ಹಾಗೂ ಯುವಕರ ಆಶಾಕಿರಣ ರಾಹುಲ್ ಗಾಂಧಿ ಜನತೆಯಲ್ಲಿ ಅರಿವು ಮೂಡಿಸಲು ಸೂಚಿಸಿರುವುದರಿಂದ ಎರ್.ಟಿ.ಇ ಕುರಿತು ಆರಿವು ಮೂಡಿಸಲಾಗುತ್ತಿದೆ ಎಂದರು.
ಯುವ ಕಾಂಗ್ರೆಸ್ ಕೋಲಾರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಶಾಹೀದ್ ಮಾತನಾಡಿ, ಬಡವರು ತಮ್ಮ ಮಕ್ಕಳನ್ನು ಆರ್.ಟಿ.ಎ ಕಾಯಿದೆಯಡಿ ಶಾಲೆಗೆ ಸೇರಿಸಿ ಉಚಿತ ಶಿಕ್ಷಣದ ಮೂಲಕ ಮಕ್ಕಳಿಗೆ ಕಡ್ಡಾಯ ವಿದ್ಯಾಭ್ಯಾಸ ನೀಡಲು ಮುಂದಾಗಬೇಕೆಂದರು. ಕಾರ್ಯದರ್ಶಿ ಸುಭಾಷ್ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

