ಕೋಲಾರ

ಬೇಡಿಕೆ ಈಡೇರಿಸಲು ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ

Published On :

ಚಿಕ್ಕಬಳ್ಳಾಪುರ: ನ್ಯಾ.ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿಯನ್ನು ಜಾರಿಗೆ ತಂದು ಮಾದಿಗ ಜನಾಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿತು.
ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ಮುಖಂಡರು ಶಿಡ್ಲಘಟ್ಟ ವೃತ್ತದಲ್ಲಿ ಕೆಲ ಸಮಯ ರಸ್ತೆ ತಡೆಸಿ ನಂತರ ಜಾಥಾ ಹೊರಟು ಜಿಲ್ಲಾಡಳಿತ ಭವನದ ಮುಂಭಾಗ ಧರಣಿ ಕುಳಿತರು.
ನ್ಯಾ.ಎ.ಜೆ. ಸದಾಶಿವರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಅಯೋಗವು ಪರಿಶಿಷ್ಟ ಜಾತಿಗಳ ಮಧ್ಯ ಸಂವಿಧಾನ ಮೀಸಲಾತಿ ಸೌಲಭ್ಯಗಳ ಹಂಚಿಕೆಯಲ್ಲಾದ ತಾರತಮ್ಯ ನಿವಾರಿಸಲು ದಕ್ಷಿಣ ಭಾರತದಲ್ಲೆ ಪ್ರಥಮ ಬಾರಿಗೆ ಮನೆ ಮನೆಗೂ ತೆರಳಿ ಸಮೀಕ್ಷಾ ಕಾರ್ಯ ಕೈಗೊಂಡು ವರದಿಯನ್ನು ಸರ್ಕಾರಕ್ಕೆ ನೀಡಿದ್ದು ಶೈಕ್ಷಣಿಕ, ಉದ್ಯೋಗ, ರಾಜಕೀಯ, ಆರ್ಥಿಕ ಕ್ಷೇತ್ರಗಳಲ್ಲಿ ಅತ್ಯಂತ ಹಿಂದುಳಿದವರಿಗೆ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳೆಂದು ಗುರುತಿಸಿದ್ದು ಮೀಸಲಾತಿ ಹಂಚಿಕೆ ಮಾಡಲು ಶಿಫಾರಸ್ಸು ಮಾಡಿದ್ದರೂ ಸರ್ಕಾರ ಈ ವರದಿಯನ್ನು ಜಾರಿಗೊಳಿಸುವಲ್ಲಿ ಗಂಭೀರವಾಗಿ ಚಿಂತನೆ ನಡೆಸಿಲ್ಲ ಎಂದು ಆರೋಪಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.