ನೀರಿಗಾಗಿ ಜೈಲಿಗೆ ಹೋಗಲು ಸಿದ್ಧ
ಶಾಶ್ವತ ನೀರಿನ ಹೋರಾಟಕ್ಕಾಗಿ ನಾನು ಜೈಲಿಗೆ ಹೋಗಲು ಸಿದ್ಧ ಎಂದು ರೈತಸಂಘ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಆರ್. ಲಕ್ಷ್ಮೀನಾರಾಣ್ ತಿಳಿಸಿದ್ದಾರೆ.
ಪರಮಶಿವಯ್ಯ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಕೈಗೆತ್ತಿಕೊಂಡು ಬಯಲು ಸೀಮೆ ಜನರಿಗೆ ನೀರುಣಿಸಬೇಕು. ಮತ ಬ್ಯಾಂಕ್ ರಾಜಕಾರಣ ಬಿಡಬೇಕು. ಕೇಂದ್ರ ಸಚಿವ ವೀರಪ್ಪಮೊಯ್ಲಿ ಜಿಲ್ಲೆಯ ಜನತೆಗೆ ದ್ರೋಹ ಮಾಡಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದಾಗ ಪರಮಶಿವಯ್ಯ ವರದಿ ಜಾರಿಗೆ ಬದ್ಧ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದ್ದರು. ಆದರೆ ಈಗ ಎತ್ತಿನಹೊಳೆ ಯೋಜನೆ ಎಂದು ತಮ್ಮ ಚುನಾವಣಾ ಹೇಳಿಕೆ ಪ್ರಾರಂಭಿಸಿದ್ದಾರೆ ಅವರಿಗೆ ಈ ಭಾಗದ ಜನರ ಬಗ್ಗೆ ಯಾವುದೇ ಕಳಕಳಿಯಿಲ್ಲ. ತಾಲೂಕಿನ ಜನತೆ ಬಂದ್ಗೆ ಹೆಚ್ಚಿನ ರೀತಿಯಲ್ಲಿ ಬೆಂಬಲಿಸಬೇಕು ಎಂದಿದ್ದಾರೆ.
ಬಂದೋಬಸ್ತ್ ಮಾಡಲಾಗಿದೆ: ತಹಸೀಲ್ದಾರ್
31 ರಂದು ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರು ಆಗಮಿಸುತ್ತಿದ್ದು ಸರ್ಕಾರಿ ಕಾರ್ಯಕ್ರಮ ಪೂರ್ವ ನಿಗದಿಯಾಗಿರುವುದರಿಂದ ಗೌರಿಬಿದನೂರು ತಾಲೂಕಿನಲ್ಲಿ ಬಂದ್ಗೆ ಅವಕಾಶ ನೀಡುವುದಿಲ್ಲ.
ಶುಕ್ರವಾರ ಎಂದಿನಂತೆ ಎಲ್ಲಾ ವಹಿವಾಟು ನಡೆಯುತ್ತದೆ ಎಂದು ತಹಸೀಲ್ದಾರ್ ಡಾ.ಬಾಸ್ಕರ್ ತಿಳಿಸಿದ್ದಾರೆ.
ಜಿಲ್ಲಾ ಬಿಜೆಪಿ ಬೆಂಬಲ
ಪರಮಶಿವಯ್ಯ ವರದಿ ಜಾರಿಗೆ ತರಲು ಕರೆದಿರುವ ಜಿಲ್ಲಾ ಬಂದ್ಗೆ ಸಂಪೂರ್ಣ ಬೆಂಬಲವಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

