ಕೋಲಾರ

ಬಂದ್ಗೆ ಬೆಂಬಲ

Published On :

ಚಿಂತಾಮಣಿ: ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ 31 ರಂದು ಅವಳಿ ಜಿಲ್ಲೆಗಳ ಹೋರಾಟ ಸಮಿತಿಗಳು ಕರೆ ನೀಡಿರುವ ಬಂದ್ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಶಿಲ್ಪ ಶಾಲಾ ಕಾರ್ಯದರ್ಶಿ ಕೆ.ಆರ್. ನರಸಿಂಹಪ್ಪ ತಿಳಿಸಿದ್ದಾರೆ. ಎತ್ತಿನಹೊಳೆ ಹೆಸರಿನಲ್ಲಿ ಎರಡು ಜಿಲ್ಲೆಗಳ ಜನತೆಯನ್ನು ದಾರಿ ತಪ್ಪಿಸುತ್ತಿರುವ ಕೇಂದ್ರ ಸಚಿವ ವೀರಪ್ಪ ಮೊಯ್ಲಿರನ್ನು ದಿಕ್ಕರಿಸಿ ಹೋರಾಟದಲ್ಲಿ ಭಾಗವಹಿಸುವುದಾಗಿ ಹೇಳಿದರು.
ಮಾದಿಗ ದಂಡೋರ ಬೆಂಬಲ: ಶಾಶ್ವತ ನೀರಾವರಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಜಿಲ್ಲಾ ಬಂದ್ಗೆ ಜಿಲ್ಲಾ ಮತ್ತು ತಾಲೂಕಿನ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. 31 ರಂದು ಜಿಲ್ಲಾಧ್ಯಕ್ಷ ಎಂ. ಕೃಷ್ಣಪ್ಪ ಹಾಗೂ ತಾಲ್ಲೂಕು ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.
ಪಟ್ಟಾಭಿರಾಮನ್
ಕುರಿತ ಕೃತಿ ಬಿಡುಗಡೆ
ಕೋಲಾರ: ಲೇಖಕಿ ಕೆ.ಆರ್. ಜಯಶ್ರೀ ಬರೆದಿರುವ ಕೋಲಾರ ಗಾಂಧಿ ಕೆ. ಪಟ್ಟಭಿರಾಮನ್ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಬೆಗ್ಲಿಹೊಸಹಳ್ಳಿ ಗ್ರೀನ್ ವ್ಯಾಲಿ ಪಬ್ಲಿಕ್ ಶಾಲೆಯಲ್ಲಿ ಫೆ.1 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ವಿಶ್ರಾಂತ ಪ್ರಾಂಶುಪಾಲರಾದ ಕೆ. ಉಮಾದೇವಿ ಪಸ್ತಕ ಬಿಡುಗಡೆ ಮಾಡುವರು. ಹಿರಿಯ ವಕೀಲ ಕೆ. ಮುನಿಸ್ವಾಮಿಗೌಡ ಅಧ್ಯಕ್ಷತೆ ವಹಿಸುವರು. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ  ಕೆ.ಆರ್. ಜಯಶ್ರೀ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.