ರೇಲ್ವೆ ಕೋಚ್ ಘಟಕ ನಿರ್ಮಾಣಕ್ಕೆ ಒಡಂಬಡಿಕೆ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರೇಲ್ವೆ ಕೋಚ್ ಘಟಕಕ್ಕೆ ಗುರುವಾರ ಬೆಂಗಳೂರಿನಲ್ಲಿ ರೇಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರದ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಬೆಂಗಳೂರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ರೇಲ್ವೆ ಮಂಡಳಿಯ ಸಲಹೆಗಾರ ಕೆ. ಸ್ವಾಮಿನಾಥನ್ ಮತ್ತು ರಾಜ್ಯ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಂದಿತಾ ಶರ್ಮ ಅವರು ಒಪ್ಪಂದಕ್ಕೆ ಸಹಿ ಮಾಡಿ ದಾಖಲೆಗಳನ್ನು ಪರಸ್ವರ ವಿನಿಮಯ ಮಾಡಿಕೊಂಡರು. ಸುಮಾರು 1,460 ಕೋಟಿ ರು.ವೆಚ್ಚದಲ್ಲಿ ಕೋಲಾರ ಜಿಲ್ಲೆಯಲ್ಲಿ ರೇಲ್ವೆ ಕೋಚ್ ಘಟಕ ಸ್ಥಾಪನೆಗೆ 2012ರ ರೇಲ್ವೆ ಬಜೆಟ್ನಲ್ಲಿ ಯೋಜನೆ ಪ್ರಕಟಿಸಲಾಗಿತ್ತು. ರಾಜ್ಯ ಸರ್ಕಾರ ಸದರಿ ಯೋಜನೆಗೆ ಬೇಕಾದ 1,100 ಎಕರೆ ಭೂಮಿಯನ್ನು ರೇಲ್ವೆ ಇಲಾಖೆಗೆ ಉಚಿತವಾಗಿ ನೀಡಲು ಒಪ್ಪಿದೆ. ಒಡಂಬಡಿಕೆ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ರೇಲ್ವೆ ರಾಜ್ಯ ಸಚಿವ ಕೆ. ಸೂರ್ಯಪ್ರಕಾಶ್ರೆಡ್ಡಿ, ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ರಾಜ್ಯ ಮೂಲ ಸೌಕರ್ಯಗಳ ಅಬಿವೃದ್ಧಿ ಸಚಿವ ರೋಷನ್ಬೇಗ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಸೇರಿದಂತೆ ಅಧಿಕಾರಿಗಳು ಇದ್ದರು. ಕೋಲಾರದಲ್ಲಿ ರೇಲ್ವೆ ಕೋಚ್ ಘಟಕ ನಿರ್ಮಾಣವಾಗುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ, ಸ್ಥಳೀಯರಿಗೆ ಉದ್ಯೋಗ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಅನುಕೂಲವಾಗುತ್ತದೆ ಎಂಬುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿಪ್ರಾಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

