ಅತ್ತಿಗಿರಿಯಿಂದ ಪರವನಹಳ್ಳಿ ರಸ್ತೆ ಕಾಮಗಾರಿ
ಬಂಗಾರಪೇಟೆ: ಸಮೀಪದ ಮಾಗೊಂದಿ ಪಂಚಾಯ್ತಿ ವ್ಯಾಪ್ತಿಯ ಅತ್ತಿಗಿರಿ ಗ್ರಾಮದಿಂದ ಪರವನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನು ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಿಸಿ ಗ್ರಾಮದಲ್ಲಿ ಉಂಟಾಗಿದ್ದ ಉದ್ವಿಗ್ನ ಸ್ಥಿತಿಯನ್ನು ಜಿಲ್ಲಾಡಳಿತ ಹತೋಟಿಗೆ ತಂದು ಪೊಲೀಸರ ನೆರವಿನೊಂದಿಗೆ ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಗ್ರಾಮದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪಕ್ಕದ ಪರವನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಕೆಲ ವ್ಯಕ್ತಿಗಳು ಹಾಗೂ ಪಂಚಾಯ್ತಿ ಅಧಿಕಾರಿಗಳ ನಡುವೆ ಗೊಂದಲ ಸೃಷ್ಟಿಯಾಗಿ ರಸ್ತೆ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದರು. ಈ ಬಗ್ಗೆ ಗ್ರಾಮದ ಯರ್ರಪ್ಪ ಮತ್ತು ನಾರಾಯಣಸ್ವಾಮಿ ರಸ್ತೆ ನಿರ್ಮಾಣದ ಜಾಗ ಗೋಮಾಳಕ್ಕೆ ಸೇರಿದ್ದು ಇದನ್ನು ಗ್ರಾಮದ ಕೆಲವರು ಆಕ್ರಮಿಸಿ ಗೊಂದಲ ಉಂಟು ಮಾಡುತ್ತಿದ್ದಾರೆಂದು ಆರೋಪಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಇತ್ಯರ್ಥಪಡಿಸಿದ ಹೈ ಕೋರ್ಟ್ ಪ್ರಕರಣ ಪರಿಶೀಲಿಸಿ ರಸ್ತೆ ಕಾಮಗಾರಿಗೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿತ್ತು. ಅದರಂತೆ ಗುರುವಾರ ತಾಲೂಕು ಆಡಳಿತ ಮತ್ತು ಪೊಲೀಸರ ಸಹಕಾರದೊಂದಿಗೆ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಹೈ ಕೋರ್ಟ್ ಸೂಚನೆಯಂತೆ ಜೆಸಿಬಿ ಮೂಲಕ ರಸ್ತೆ ನಿರ್ಮಾಣಕ್ಕೆ ಮುಂದಾದಾಗ ಕೆಲವರು ಮತ್ತೆ ತಕರಾರು ತೆಗೆದರೂ ಲೆಕ್ಕಿಸದೆ ರಸ್ತೆ ನಿರ್ಮಾಣ ಕಾರ್ಯ ಮುಂದುವರೆಸಿದರು.
ಅತ್ತಿಗಿರಿ ಗ್ರಾಮದಿಂದ ಪಕ್ಕದ ಪರವನಹಳ್ಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಪಂಚಾಯ್ತಿ ಕಳೆದ 4ವರ್ಷಗಳಿಂದ ಯತ್ನಿಸಿದರೂ ಕೆಲವು ಪ್ರಭಾವಿ ವ್ಯಕ್ತಿಗಳು ಅಡ್ಡಿಪಡಿಸಿದ್ದರಿಂದ ಕಾಮಗಾರಿ ನೆನೆಗಿದಿಗೆ ಬಿದ್ದಿತ್ತು. ಹಲವು ಸುತ್ತಿನ ಪಂಚಾಯ್ತಿ ಮಾಡಿದರು ಫಲ ನೀಡಲಿಲ್ಲ. ಈಗ ಕೋರ್ಟ್ ಸೂಚನೆ ಮೇರೆಗೆ ರಸ್ತೆ ಕಾಮಗಾರಿ ಸಾಗಿರುವುದಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

