ಪೆಟ್ಟಿಗೆ ಅಂಗಡಿಗೆ ಬೆಂಕಿ; ಅಪಾರ ನಷ್ಟ
ಟೇಕಲ್: ಟೇಕಲ್ ರೈಲ್ವೆ ನಿಲ್ದಾಣದ ಸಮೀಪದ ಗೋಪಸಂದ್ರದ ವೆಂಕಟೇಶಪ್ಪರಿಗೆ ಸೇರಿದ ಪೆಟ್ಟಿಗೆ ಅಂಗಡಿಗೆ ದುಷ್ಕರ್ಮಿಗಳು ಬೆಂಕಿಯಿಟ್ಟ ಪರಿಣಾಮ ತರಕಾರಿ ಹಾಗೂ ಇತರೆ ಸಾಮಾನು ಸುಟ್ಟು ಕರಕಲಾಗಿವೆ. ಅಂಗಡಿಯ ಸಣ್ಣ ಸಂಧಿಯಿಂದ ಸೀಮೆಎಣ್ಣೆ ಹಾಕಿ ಬೆಂಕಿ ಇಡಲಾಗಿದ್ದು, ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಅಂಗಡಿ ಮಾಲೀಕ ಆರೋಪಿಸಿದ್ದಾರೆ. ಇದರಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಟೇಕಲ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿಕ್ಷಣ ಹಕ್ಕು ಕಾಯ್ದೆ ಸಮರ್ಪಕ ಜಾರಿಗಾಗಿ ಶಾಲೆಗಳಿಗೆ ಭೇಟಿ
ಮಾಲೂರು: ತಾಲೂಕಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸುವಂತೆ ಕಾರ್ಯಕರ್ತರು ಪ್ರತಿ ಶಾಲೆಗೂ ಭೇಟಿ ನೀಡಲಿರುವುದಾಗಿ ಯುವಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಎನ್. ಪಾಪರೆಡ್ಡಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರ ಬಡಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ಹಕ್ಕು ಕಾಯ್ದೆ ಜಾರಿ ತಂದಿದೆ. ಆದರೆ ರಾಜ್ಯದಲ್ಲಿ 37 ಸಾವಿರ ಮಂದಿ ನೋಂದಣಿ ಮಾಡಿಕೊಳ್ಳದಿರುವುದು ಶೋಚನೀಯ ಎಂದರು. ತಾಲೂಕಿನಲ್ಲಿ ಅವಕಾಶವಿದ್ದ 411 ನೋಂದಣಿ ಪೂರ್ಣಗೊಂಡಿರುವುದು ಸಂತಸದ ವಿಷಯ. ಆದರೆ ಕೇಂದ್ರ ಸರ್ಕಾರ 1 ನೇ ತರಗತಿ ಮತ್ತು ಎಲ್ಕೆಜಿಯಿಂದ ಹತ್ತನೇ ತರಗತಿ ವರೆಗೆ ಜಾರಿಗೂಳಿಸಿರುವ ಶಿಕ್ಷಣ ಹಕ್ಕು ಕಾಯ್ದೆಯಡಿ ಶೇ.25 ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾಭ್ಯಾಸ ನೀಡಬೇಕೆಂದು ನಿರ್ಣಯಗೊಳಿಸಿದೆ. ಶುಕ್ರವಾರ ಖಾಸಗಿ ಶಾಲೆಗಳಿಗೆ ಭೇಟಿ ನೀಡಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಖಾಸಗಿ ಸಂಸ್ಥೆಗಳಿಗೆ ಮನವಿ ಮಾಡಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

