ಕೋಲಾರ

ಶಾಸಕರ ಏಕಪಕ್ಷೀಯ ಧೋರಣೆ; ಆರೋಪ

Published On :

ಬಾಗೇಪಲ್ಲಿ: ದೀನ ದಲಿತರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡುತ್ತಿದೆಯಾದರೂ ರಾಜಕೀಯ ನಾಯಕರ ಇಚ್ಚಾಶಕ್ತಿ ಕೊರತೆ ಹಾಗೂ ಕೆಲವು ದಳ್ಳಾಳಿಗಳಿಂದ ಅರ್ಹ ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದು ದಲಿತ ಸಂಘರ್ಷ ಸೇನೆಯ ತಾಲೂಕು ಅಧ್ಯಕ್ಷ ಎಸ್.ಎನ್.ನರಸಿಂಹಪ್ಪ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2012-13 ನೇ ಸಾಲಿನಲ್ಲಿ  ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ಸರ್ಕಾರದ ಮಾನದಂಡದ ಪ್ರಕಾರ ಆಯ್ಕೆ ಮಾಡಬೇಕಾಗಿದ್ದ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರದ ಕಾನೂನು ಗಾಳಿಗೆ ತೂರಿ, ಸಮಿತಿಯ ಇತರೇ ಸದಸ್ಯರನ್ನು ಪರಿಗಣಿಸದೇ ಏಕಪಕ್ಷೀಯವಾಗಿ ತಮಗೆ ಇಷ್ಟ ಬಂದವರನ್ನು ಆಯ್ಕೆ ಮಾಡುವ ಮೂಲಕ ಸಮಿತಿ ಸದಸ್ಯರನ್ನು ಕಡೆಗಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಂದೊಂದು ಗ್ರಾಪಂ ವ್ಯಾಪ್ತಿಯಲ್ಲಿ ಕೇವಲ ಒಂದೇ ಗ್ರಾಮವನ್ನು ಗಣನೆಗೆ ತೆಗೆದುಕೊಂಡು ಒಂದೇ ಗ್ರಾಮದಲ್ಲಿ 5-6 ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಸಮಿತಿಯಲ್ಲಿ ತಾಲೂಕು ಮಟ್ಟದ ಬಹುತೇಕ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಆದರೆ, ಈ ಸಮಿತಿಯ ಸದಸ್ಯರ ಗಮನಕ್ಕೆ ತಾರದೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆಎಂದು ಆರೋಪಿಸಿದರು. ಜಿಲ್ಲಾಧ್ಯಕ್ಷ ಡಿ.ವಿ. ನಾರಾಯಣಸ್ವಾಮಿ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಎಂ. ವೆಂಕಟರವಣಪ್ಪ, ತಾಲೂಕು ಉಪಾಧ್ಯಕ್ಷ ಜಿ. ಕೃಷ್ಣಪ್ಪ, ಕಾರ್ಯದರ್ಶಿ ಸುಧಾಕರ್, ಕೃಷ್ಣೇನಾಯಕ್ ಇದ್ದರು.
ಪರೀಕ್ಷಾ ಪೂರ್ವ ಸಿದ್ಧತೆ ಕಾರ್ಯಕ್ರಮ
ಚಿಂತಾಮಣಿ: ಭಯ, ಒತ್ತಡಗಳಿಂದ ಪರೀಕ್ಷೆ ಎದುರಿಸಬೇಡಿ, ಆತ್ಮವಿಶ್ವಾಸದಿಂದ ಸಿದ್ಧರಾಗಿ ಎಂದು ಪ್ರವಚನಕಾರ ತಳಗವಾರ ಟಿ.ಎಲ್. ಆನಂದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲೂಕಿನ ಹೀರೇಕಟ್ಟಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಪನ್ಯಾಸ ನೀಡಿದರು.
ಪದಾಧಿಕಾರಿಗಳ ಆಯ್ಕೆ
ಚಿಂತಾಮಣಿ: ತಾಲೂಕಿನ ಕಂಗಾನಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಕರ್ನಾಟಕ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಅಂಬಾಜಿದುರ್ಗ ಹೋಬಳಿ ಪದಾಧಿಕಾರಿಗಳ ಆಯ್ಕೆ ಸಭೆ ನಡೆದಿದೆ.
ಈ ಸಭೆಗೆ ರಾಜ್ಯಾಧ್ಯಕ್ಷ ಎಂ. ಶಂಕರಪ್ಪ ಅಧ್ಯಕ್ಷತೆ ವಹಿಸಿದ್ದು ಹೋಬಳಿ ಅಧ್ಯಕ್ಷ ಶ್ರೀರಾಮಪ್ಪ, ಉಪಾಧ್ಯಕ್ಷ ನರಸಿಂಹಪ್ಪ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಸಹ ಕಾರ್ಯದರ್ಶಿ ನಾರಾಯಣಪ್ಪ, ಸಂಘಟನಾ ಕಾರ್ಯದರ್ಶಿ ದ್ಯಾವಪ್ಪ, ಖಜಾಂಚಿ ಕಾಂತರಾಜ್, ಗೌರವಾಧ್ಯಕ್ಷ ಬ್ಯಾಟರಾಯಪ್ಪ, ಜಂಟಿ ಕಾರ್ಯದರ್ಶಿ ಗಂಗುಲಪ್ಪ, ಕಾರ್ಯದರ್ಶಿ ಜಿ. ಶ್ರೀನಿವಾಸಪ್ಪ, ಕದಿರಪ್ಪ, ಸೀನರನ್ನು ಆಯ್ಕೆಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.