ಕೋಲಾರ

ಆರ್‌ಟಿಇ ಸಮರ್ಪಕ ಅನುಷ್ಠಾನಕ್ಕೆ ಮನವಿ

Published On :

ಮಾಲೂರು: ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಿರುವ ಶಿಕ್ಷಣ ಹಕ್ಕು ಕಾಯ್ದೆಯಡಿ ತಾಲೂಕಿನಲ್ಲಿ ಪೂರ್ಣಗೊಂಡಿರುವ ದಾಖಲಾತಿ ಸರಿಯಾದ ರೀತಿಯಲ್ಲಿ ಹಂಚಿಕೆ ಮಾಡಿ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಶಿಕ್ಷಣ ಇಲಾಖೆಗೆ ಶುಕ್ರವಾರ ಭೇಟಿ ನೀಡಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಪಾಪರೆಡ್ಡಿ, ಫೆ.8 ರವರೆಗೂ ದಾಖಲಾತಿ ಸಲ್ಲಿಸಬಹುದಾಗಿದ್ದರೂ ತಾಲೂಕಿನ ಕೆಲವು ಖಾಸಗಿ ಶಾಲೆಗಳು ದಾಖಲಾತಿ ಪ್ರಕ್ರಿಯೆ ಸ್ಥಗಿತಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಪೆ.8 ರವರಗೆ ದಾಖಲಾತಿ ಮಾಡಿಕೊಳ್ಳುವಂತೆ ಆದೇಶಿಸಬೇಕು ಎಂದ ಎಂದು ಮನವಿ ಮಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ ಚಂದ್ರ, ಹರೀಶ್, ತಾಲೂಕು ಕಾಂಗ್ರೆಸ್ ಉಪಾಧ್ಯಕ್ಷ ರಾಜಗೋಪಾಲ್ ರೆಡ್ಡಿ, ಯುವ ಅಧ್ಯಕ್ಷ ಸುನೀಲ್, ಶಬ್ಬೀರ್,ಪ್ರವೀಣ್‌ಕುಮಾರ್, ರಮೇಶ್, ನಯೀಂ, ಚಲಪತಿ, ಸಂಪತ್ತು, ಹರೀಶ್, ಸೈಯದ್, ಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.