ಕೋಲಾರ

ರಕ್ತದಾನ ಶಿಬಿರ

Published On :

ಕೆಜಿಎಫ್: ವೈದ್ಯರ ದಿನಾಚರಣೆ ಅಂಗವಾಗಿ ನಗರದ ಖಾಸಗಿ ವೈದ್ಯರ ಸಂಘದಿಂದ ಶ್ಯಾಮ್ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ವೈದ್ಯರು ರಕ್ತದಾನ ಮಾಡಿದರು.
ಈ ವೇಳೆ ಮಾತನಾಡಿದ ಖಾಸಗಿ ಆಸ್ಪತ್ರೆ ವೈದ್ಯರ ಸಂಘದ ಅಧ್ಯಕ್ಷ ಡಾ.ಡಿ.ಎಸ್. ಮಂಜುನಾಥ್, ಡಾ. ಬಿದನ್ಚಂದ್ರ ರಾಯ್ ವೈದ್ಯಕೀಯ ವೃತ್ತಿಯಲ್ಲಿ ಮಾಡಿದಂತಹ ಉತ್ತಮ ಸೇವೆಯನ್ನು ಗುರುತಿಸಿ ಭಾರತ ಸರ್ಕಾರ ಡಾ.ಬಿ.ಸಿ. ರಾಯ್ ಅವರ ಜನ್ಮದಿನದಂದು ವೈದ್ಯರ ದಿನ ಆಚರಿಸಲು ಆದೇಶಿಸಿತು. ಈ ಹಿನ್ನೆಲೆಯಲ್ಲಿ ಜುಲೈ 1 ರಂದು ದೇಶಾದ್ಯಂತ  ವೈದ್ಯರ ದಿನಾಚರಣೆ ಅಂಗವಾಗಿ ನಗರದ ಶ್ಯಾಮ್ ಆಸ್ಪತ್ರೆಯಲ್ಲಿ ಉಚಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ರಕ್ತದಾನ ಮಹಾದಾನ. ಆದ್ದರಿಂದ ಪ್ರತಿಯೊಬ್ಬರು ರಕ್ತವನ್ನು ದಾನ ಮಾಡುವ ಮೂಲಕ ಮನುಷ್ಯರು ಜೀವಕ್ಕಾಗಿ ಹೋರಾಡುತ್ತಿರುವ ಸಮಯದಲ್ಲಿ ರಕ್ತ Ú ಪ್ರಾಣವನ್ನು ಉಳಿಸುತ್ತದೆ ಎಂದರು.  ಶಿಬಿರದಲ್ಲಿ ಭಾಗವಹಿಸಿದ್ದ ವೈದ್ಯರಾದ ಡಾ. ನಾಗಪ್ಪ, ಡಾ. ಅಶೋಕ್ವರ್ಧನ್, ಡಾ. ಮೋಹನ್ಕೃಷ್ಣ, ಡಾ. ಸೆಂದಿಲ್, ಡಾ. ಸಲ್ಡಾನ ಡಾ. ಮೈತಿಲಿ, ಡಾ. ಆದರ್ಶ್, ಡಾ.ಸತೀಶ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ರಕ್ತದಾನ ಮಾಡಿದರು.ಅಧ್ಯಕ್ಷತೆ ವಹಿಸಿದ್ದ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ವೈದ್ಯರಾದ ಡಾ. ಬಾನುಮತಿ ಎಲ್ಲಾ ರೀತಿಯ ವ್ಯವಸ್ಥೆ ಹಮ್ಮಿಕೊಂಡಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.