ಜೀವನದಲ್ಲಿ ಜಿಗುಪ್ಸೆ: ವ್ಯಕ್ತಿ ಆತ್ಮಹತ್ಯೆ
ಮಾಲೂರು: ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಪಟ್ಟಣದ ಕುಂಬಾರಪೇಟೆಯಲ್ಲಿ ಮಂಗಳವಾರ ನಡೆದಿದೆ. ಅತ್ಮಹತ್ಯೆ ಮಾಡಿಕೊಂಡವರನ್ನು ಏಸ್ ಗಾಡಿ ಚಾಲಕನಾಗಿದ್ದ ಚಂದ್ರಶೇಖರ್ (46)ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳನ್ನು ಹೊಂದಿರುವ ಚಂದ್ರಶೇಖರ್, ಪತ್ನಿ ಶಾಂತಮ್ಮ ಸ್ಥಳೀಯ ಕೈಗಾರಿಕಾ ಪ್ರಾಂಗಾಣದಲ್ಲಿರುವ ಮೇಡೋಫಾರ್ಮ್ದಲ್ಲಿ ಕೆಲಸಕ್ಕೆಂದು ಹೋಗಿದ್ದಾಗ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಕುಡಿತದ ಚಟವಿದ್ದ ಚಂದ್ರಶೇಖರ್ ಅದಕ್ಕಾಗಿಯೇ ಸಾಲವನ್ನು ಹೆಚ್ಚು ಮಾಡಿಕೊಂಡಿದ್ದ ಎನ್ನಲಾಗಿದೆ. ಎಸ್ಐ ದಯಾನಂದ್ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮನೆಯಲ್ಲಿ ಕಳವು
ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿದ್ದಾಗ ಯಾರೋ ಕಳ್ಳರು ಮನೆ ಬಾಗಿಲ ಬೀಗ ಮುರಿದು ಒಳ ನುಗ್ಗಿ ಕಬ್ಬಿಣದ ಅಲ್ಮೇರದಲ್ಲಿ ಇಟ್ಟಿದ್ದ ಸುಮಾರು 2 ಲಕ್ಷ ರು. ಬೆಲೆ ಬಾಳುವ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆಂದು ಮನೆಯ ಮಾಲೀಕ ಮುನಿಪಾಪಣ್ಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಜು.30 ರಂದು ಬೆಳಿಗ್ಗೆ ಮುನಿಪಾಪಣ್ಣ ತೋಟಕ್ಕೆ ಹೋಗಿ ಸಂಜೆ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

