ಬಹುಮತವಿದ್ದರೂ ಸೋತ ಬಿಜೆಪಿ!
ಬಂಗಾರಪೇಟೆ: 40 ತಿಂಗಳು ತಾಪಂನಲ್ಲಿ ಆಡಳಿತ ನಡೆಸಿದ ಬಿಜೆಪಿ ಮೂರನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಬಹುಮತವಿದ್ದರೂ ಸೋಲುವ ಮೂಲಕ ಮುಖಭಂಗ ಅನುಭವಿಸಿದೆ.
ಮೊದಲಿನಿಂದಲೂ ತಾಪಂ ಅಡಳಿತ ಕಾಂಗ್ರೆಸ್ ವಶದಲ್ಲಿತ್ತು. 40 ತಿಂಗಳ ಹಿಂದೆ ಕಾಂಗ್ರೆಸ್ ಶಾಸಕರಾಗಿದ್ದ ಎಂ.ನಾರಾಯಣಸ್ವಾಮಿ ಬಿಜೆಪಿ ಸೇರಿದ್ದರಿಂದ ಅದೇ ಸಂದರ್ಭದಲ್ಲಿ ನಡೆದ ತಾಪಂ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿಗೆ ಬಹುಮತ ಸಿಕ್ಕಿತ್ತು. ನಂತರ ಮತ್ತೆ ಕಾಂಗ್ರೆಸ್ ಸೇರಿ ಶಾಸಕರಾಗಿ ಎಸ್.ಎನ್.ನಾರಾಯಣಸ್ವಾಮಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಭದ್ರಕೋಟೆಯನ್ನು ಭದ್ರಪಡಿಸಿದರು. ತಾಪಂ ಆಡಳಿತ ಮಂಡಳಿಯಲ್ಲಿ ಬಿಜೆಪಿ ಪಾರುಪತ್ಯವಿದ್ದರೂ ಸದಸ್ಯರ ಸಮಸ್ಯೆಗಳಿಗೆ ಪಕ್ಷದ ಯಾವ ನಾಯಕರೂ ಸ್ಪಂದಿಸದ ಕಾರಣ ಕಾರ್ಯಕರ್ತರು ಅನಾಥರಾಗಿದ್ದರು. ಇದರಿಂದ ಬೇಸತ್ತ ಕೆಲವು ಸದಸ್ಯರು ಕಾಂಗ್ರೆಸ್ ಸೇರಲು ಮುಂದಾಗಿದ್ದರು. ತಾಪಂನ ಮೂರನೆ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಮೂವರು ಬಿಜೆಪಿ ಸದಸ್ಯರಾದ ವಿಜಯಲಕ್ಷ್ಮೀ, ರಾಮಚಂದ್ರರೆಡ್ಡಿ ಮತ್ತು ಬಾಬು ಕಾಂಗ್ರೆಸ್ ಸೇರುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಇದಲ್ಲದೆ ಪಕ್ಷೇತರರಾಗಿ ಆಯ್ಕೆಯಾಗಿದ್ದ ವೆಂಕಟರತ್ನಮ್ಮ ಮತ್ತು ಶಾಂತಕುಮಾರಿ ಸಹ ಕೈ ಹಿಡಿದಿದ್ದರಿಂದ ಕಾಂಗ್ರೆಸ್ಗೆ ಆಡಳಿತ ಚುಕ್ಕಾಣಿ ಸಿಕ್ಕಿದೆ. ಅಲ್ಲದೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿಲ್ಲದ ಕಾರಣ ಆ ಪಕ್ಷದ ಕಾರ್ಯಕರ್ತರು ಈಗಾಗಲೇ ಕಾಂಗ್ರೆಸ್ ಪರ ಮುಖ ಮಾಡುತ್ತಿರುವುದರಿಂದ ಹಾಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಲು ಶಕ್ತಿ ಬಂದಿದೆ.
ಇದರಿಂದ ಪುಳಿಕಿತರಾಗಿರುವ ಶಾಸಕ ನಾರಾಯಣಸ್ವಾಮಿ ಮುಂದೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕ್ಷೇತ್ರದಲ್ಲಿಯೂ ಹೆಸರಿಲ್ಲದಂತೆ ಮಾಡುವುದಾಗಿ ಶಪಥ ಮಾಡಿದ್ದಾರೆ. ಅಲ್ಲದೇ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಕೆಲವರು ವಿನಾಕಾರಣ ಗೊಂದಲ ಉಂಟು ಮಾಡುತ್ತಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

