ಸಾಕ್ಷರತಾ ಸಂಯೋಜಕರ ನಿಯೋಜನೆಗೆ ಆಗ್ರಹ
ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ಸಾಕ್ಷರ ಭಾರತ್ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಲೋಕಶಿಕ್ಷಣ ಸಮಿತಿಯು ಜೂನ್ 2014ರಿಂದ ಆಗಸ್ಟ್ 2014ರವರೆಗಿನ ತ್ರೈಮಾಸಿಕ ಕ್ರಿಯಾಯೋಜನೆ ಸಿದ್ಧಪಡಿಸಿದೆ. ಆದರೆ ಅದನ್ನು ಒಂದು ತಿಂಗಳಾದರೂ ಸಹ ಅನುಷ್ಠಾನಗೊಳಿಸಿಲ್ಲವೆಂದು ಜಿಲ್ಲಾ ಸಾಕ್ಷರತಾ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಬಿ.ವಿ. ಶ್ರೀರಾಮರೆಡ್ಡಿ ದೂರಿದ್ದಾರೆ. ಪ್ರತಿ ತಾಲೂಕಿಗೂ ಒಬ್ಬರಂತೆ ಸಾಕ್ಷರತಾ ಸಂಯೋಜನರನ್ನು ನೇಮಿಸಲಾಗಿದೆ. ಅವರಲ್ಲಿ ಹೆಚ್ಚಿನವರು ಸರ್ಕಾರಿ ಶಿಕ್ಷಕರೇ ಇದ್ದರು. ಇತ್ತೀಚೆಗೆ ಸರ್ಕಾರ ಶಿಕ್ಷಕರನ್ನು ಆ ಸ್ಥಾನದಿಂದ ತೆರವುಗೊಳಿಸಿ ಮಾತೃ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚಿಸಿರುವ ಮೇರೆಗೆ ಸಾಕ್ಷರತಾ ಸಂಯೋಜನಕರಾಗಿ ನಿಯೋಜನೆಗೊಂಡಿದ್ದ ಶಿಕ್ಷಕರು ತಮ್ಮ ಶಾಲೆಗಳಿಗೆ ಹಿಂದಿರುಗಿದ್ದಾರೆ. ಇದರಿಂದ ಹಲವು ತಾಲೂಕುಗಳಲ್ಲಿ ಸಾಕ್ಷರತಾ ಸಂಯೋಜನಕರಿಲ್ಲದೆ ತೊಂದರೆಯಾಗುತ್ತಿದೆ. ಈ ಕೂಡಲೇ ತೆರವುಗೊಂಡಿರುವ ತಾಲೂಕು ಸಂಯೋಜಕರ ಸ್ಥಾನಕ್ಕೆ ಇತರರನ್ನು ಭರ್ತಿ ಮಾಡಿ, ಸಾಕ್ಷರತಾ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಲೋಕಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

