ಕೋಲಾರ

ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Published On :

ಚಿಂತಾಮಣಿ: ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನಗರದ ಪ್ರವಾಸಿ ಮಂದಿರದಿಂದ ಎಬಿವಿಪಿ ಚಿಂತಾಮಣಿ ಶಾಖೆ ವತಿಯಿಂದ ನೂರಾರು ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ವರ್ಷ ತರಗತಿಗಳು ಪ್ರಾರಂಭವಾಗಿದ್ದರೂ, ಇದುವರೆಗೂ ಪಠ್ಯ ಪುಸ್ತಕಗಳನ್ನು ಸರ್ಕಾರ ವಿತರಿಸುವಲ್ಲಿ ಮೀನಾಮೇಷ ಎನಿಸುತ್ತಿದೆ. ಪರಿಣಾಮ ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆಯಾಗಿ, ಆಧ್ಯಾಪಕರು ಗೊಂದಲದಲ್ಲಿದ್ದಾರೆಂದು ಆಗ್ರಹಿಸಿದರು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಏಕಾಏಕಿ ತರಗತಿಗಳನ್ನು ಬಹಿಷ್ಕರಿಸಿ, ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಎಬಿವಿಪಿ ಮುಖಂಡ ಮಂಜುನಾಥ ರೆಡ್ಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ರಾಜ್ಯದಲ್ಲಿನ ಪದವಿ ಪೂರ್ವದಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡದೆ ಸರ್ಕಾರ ಈ ಕೂಡಲೇ ಎತ್ತೆಚ್ಚು ಪಠ್ಯ ಪುಸ್ತಕಗಳನ್ನು ಮಾರುಕಟ್ಟೆಯಲ್ಲಿ ದೊರೆಯುವಂತೆ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಿದರು. ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ಸುರೇಶ್, ನವಾಜ್, ರವಿ, ಲಕ್ಷ್ಮಣ್ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.