ವಕೀಲ ವಿರುದ್ಧ ಪೊಲೀಸರ ಕ್ರಮಕ್ಕೆ ಖಂಡನೆ
ಚಿಂತಾಮಣಿ: ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ವಕೀಲರೊಬ್ಬರ ಮೇಲೆ ಪೊಲೀಸರು ವಿನಾಕಾರಣ ಅವಾ ಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ, ದುರುದ್ದೇಶದಿಂದ ಜೈಲಿಗೆ ಕಳುಸಿದ ಕ್ರಮವನ್ನು ಖಂಡಿಸಲಾಯಿತು. ಚಿಂತಾಮಣಿಯಲ್ಲಿ ವಕೀಲರು ನ್ಯಾಯಾಲಯದ ಕಾರ್ಯ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
2 ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ವಕೀಲ ಶ್ರೀನಿವಾಸ್ ಎಂಬವರ ಮೇಲೆ ಪೊಲೀಸರು ಅವಾಚ್ಯ ಶಬ್ದಗಳಿಂದ ಬೈದ ಕ್ರಮವನ್ನು ಖಂಡಿಸಿದರು. ವಕೀಲರು ನ್ಯಾಯಕ್ಕಾಗಿ ಆಗ್ರಹಿಸಿ ಇಂದು ಸಾಮೂಹಿಕ ಪ್ರತಿಭಟನೆ ನಡೆಸಿದರು.
ವಕೀಲರ ಸಂಘದ ಕಾರ್ಯದರ್ಶಿ ನಾ. ಶಂಕರ್ ಪ್ರತಿಭಟನಗಾರರನ್ನು ಉದ್ದೇಶಿಸಿ, ಕಾನೂನು ಪಾಲನೆ ಮಾಡಬೇಕಾದ ಪೊಲೀಸರು ಕಾನೂನನ್ನು ಉಲ್ಲಂಘಿಸಿ, ರಾದ್ಧಾಂತ ಮಾಡಿ ಜೈಲಿಗೆ ಕಳುಹಿಸಿದ ಪೊಲೀಸರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಹಿರಿಯ ವಕೀಲರಾದ ಜಿ.ಎಂ. ಇಬ್ರಾಹಿಂ, ರಾಜಾರಾಮ್, ಎ.ಎಸ್. ನಾಗರಾಜ್, ವಕೀಲರಾದ ನಾರಮಾಕಲಹಳ್ಳಿ ಶ್ರೀನಿವಾಸ್, ಅನ್ವರ್ ಪಾಷ, ಈಶ್ವರಗೌಡ, ರಚನಾ ಗೌಡ, ಶಿವಕುಮಾರ್, ಅಮರನಾರಾಯಣ್, ಮುನಿಕೃಷ್ಣ, ಪ್ರಸಾದ್ ಸೇರಿದಂತೆ ನೂರಾರು ವಕೀಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

