ಕೋಲಾರ

ಅನಧಿಕೃತ ಶಾಲಾ-ಕಾಲೇಜುಗಳ ಮಾಹಿತಿ ನೀಡಿ: ಡಿಡಿಪಿಐಗೆ ಸಚಿವ ಖಾದರ್ ಸೂಚನೆ

Published On :

ಕೋಲಾರ: ಜಿಲ್ಲೆಯಲ್ಲಿನ ಅನಧಿಕೃತ ಶಾಲಾ-ಕಾಲೇಜುಗಳ ಮಾಹಿತಿಯನ್ನು ಇನ್ನೊಂದು ವಾರದಲ್ಲಿ ನೀಡುವಂತೆ ಡಿಡಿಪಿಐಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರು ನಗರದಲ್ಲಿ ಅನಧಿಕೃತವಾಗಿ ತೆರೆಯಲಾಗಿರುವ ಬಬಾಲ್ಡ್‌ವಿನ್ ಶಾಲೆಯನ್ನು ಮುಚ್ಚಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದರೂ ಸ್ಪಂಧಿಸಿಲ್ಲವೆಂಬ ಆರೋಪಕ್ಕೆ ಉತ್ತರಿಸಿದ ಅವರು, ಬಾಲ್ಡ್‌ವಿನ್ ಶಾಲೆ ಮಾತ್ರವಲ್ಲದೆ ಜಿಲ್ಲೆಯಲ್ಲಿ ಎಷ್ಟು ಶಾಲಾ-ಕಾಲೇಜುಗಳು ಪರವಾನಗಿ ಇಲ್ಲದೆ ಪ್ರಾರಂಭಿಸಲಾಗಿದೆ, ದಾಖಲು ಆಗಿರುವ ಮಕ್ಕಳ ಸಂಖ್ಯೆ ಎಷ್ಟು ಎಂಬುದನ್ನು ಪಟ್ಟಿ ಮಾಡಿಕೊಡುವಂತೆ ತಿಳಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಎತ್ತಿನಹೊಳೆ ಯೋಜನೆಯನ್ನು ಕರಾವಳಿ ಭಾಗದ ಜನತೆಗೆ ಅನಾನುಕೂಲವಾಗದಂತೆ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ, ಈಗಾಗಲೇ ಟೆಂಡರ್ ಕರೆಯಲಾಗಿದೆ. ನಮ್ಮವರೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ಅರ್ಜಿ ಇತ್ಯರ್ಥವಾದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆಯ ಜೊತೆಗೆ ಪಶ್ಚಿಮಘಟ್ಟದಿಂದ ನೀರು ತರಬೇಕೆಂಬ ಜನರ ಬಯಕೆ ಈಡೇರಿಸುವ ಸಂಬಂಧ ಚಿಂತನೆ ಮಾಡಲಾಗುತ್ತದೆ, ಸದರಿ ಯೋಜನೆಯಿಂದಾಗುವ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಯುತ್ತಿದೆ ಎಂದರು.
ಕೋರಮಂಗಲ-ಚಲಘಟ್ಟ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ಕೋಲಾರ ಜಿಲ್ಲೆಯ ಕೆರೆಗಳಿಗೆ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಜನಾಭಿಪ್ರಾಯ ಸಂಗ್ರಹಣೆ ಮಾಡಲಾಗುತ್ತಿದೆ. ತ್ಯಾಜ್ಯ ಘಟಕದಿಂದ ಪೈಪ್‌ಲೈನ್ ಮೂಲಕ ನೇರವಾಗಿ ನೀರು ಪೂರೈಕೆ ಮಾಡಬೇಕೇ ಇಲ್ಲವೇ ಕೆರೆಗಳಿಗೆ ನೀರು ಹರಿಸುವುದು ಸೂಕ್ತವೇ ಎಂಬುದರ ಕುರಿತು ಚರ್ಚೆಗಳು ನಡೆಯುತ್ತಿದೆ ಎಂದು ಸಚಿವ ಖಾದರ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.