ಕೋಲಾರ

ದಲಿತ ವಿರೋಧಿ ಡಿಸಿ ವರ್ಗಾವಣೆಗೆ ಆಗ್ರಹ

Published On :

ಚಿಂತಾಮಣಿ: ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಜಿಲ್ಲಾಧಿಕಾರಿ ಆರ್. ವಿಶಾಲ್ ಅವರ ಕಾರ್ಯವೈಖರಿ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಬೃಹತ್ ಪ್ರತಿಭಟನೆ ನಡೆಸಿ ಇವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾಧ್ಯಕ್ಷ ಕೆ.ಸಿ. ರಾಜಾಕಾಂತ್ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಜನವಿರೋಧಿ, ದಲಿತ ವಿರೋಧಿ, ಸಂವಿಧಾನ ವಿರೋಧಿ ಜಿಲ್ಲಾಧಿಕಾರಿ ಆರ್. ವಿಶಾಲ್ ಅವರ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಜು. 11 ರಂದು ಬೆಳಿಗ್ಗೆ 11ಕ್ಕೆ ಮೆರವಣಿಗೆ ಮತ್ತು ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಂತರ ಮಾತನಾಡಿದ ತಾಲೂಕು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡ ಜಿ.ನಾರಾಯಣಸ್ವಾಮಿ ಮಾತನಾಡಿ ಜಿಲ್ಲೆಯಲ್ಲಿ ಹಲವಾರು ಕಾನೂನು ಬಾಹಿರ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಜಿಲ್ಲಾಧಿಕಾರಿಗಳು ಇದಕ್ಕೆ ಕಡಿವಾಣ ಹಾಕದೆ ದಲಿತರ ಅಭಿವೃದ್ಧಿ ಸಹಿಸದೆ ಮತ್ತು ಸಂವಿಧಾನ ಬದ್ದ ಹಕ್ಕುಗಳನ್ನು ಗಾಳಿಗೆ ತೂರಿ ದಲಿತ ವಿರೋಧಿ ನೀತಿಯನ್ನು ಅನುಸರಿಸಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿರುವ ಜಿಲ್ಲಾಧಿಕಾರಿ ತಕ್ಷಣ ಅಮಾನತ್ ಮಾಡಬೇಕೆಂದು ಇಲ್ಲವಾದ ಪಕ್ಷದಲ್ಲಿ ರಾಜ್ಯಾದ್ಯಂತ ದಲಿತರ ಶಕ್ತಿ ಪ್ರದರ್ಶನ ಮಾಡಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪದಾಧಿಕಾರಿಗಳಾದ ನಾರಾಯಣಜಿ, ಜಂಗಮಶೀಗಹಳ್ಳಿ ದೇವರಾಜ್, ನಾರಾಯಣಪ್ಪ, ಅಗ್ರಹಾರ ಮುರಳಿ, ಕಲ್ಲಹಳ್ಳಿ ಕೃಷ್ಣಮೂರ್ತಿ, ಕೈವಾರ ಮಂಜುನಾಥ್, ನಗರಸಭಾ ಸದಸ್ಯರಾದ ಆರ್. ಪ್ರಕಾಶ್, ಬ್ಲಡ್ ಮಂಜು ಸೇರಿದಂತೆ ಇನ್ನೂ ಹಲವಾರು ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.