ಕೋಲಾರ

ಪಕ್ಷ ವಿರೋಧಿಗಳ ಬಗ್ಗೆ ಹೈಕಮಾಂಡ್‌ಗೆ ವರದಿ

Published On :

ಮಾಲೂರು: ತಾಪಂ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿಗೆ ವರದಿ ಸಲ್ಲಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೃಷ್ಣಾ ರೆಡ್ಡಿ ಹೇಳಿದರು. ಇಲ್ಲಿನ ತಾಪಂ ಉಪಾಧ್ಯಕ್ಷೆಯಾಗಿ ಬಿಜೆಪಿಯ ಮಂಜುಳಾ ವೆಂಕಟೇಶ್ ಅವರನ್ನು ಅಭಿನಂದಿಸಿ ಮಾತನಾಡಿ, ತಾಪಂನಲ್ಲಿ ಕಮಲದ ಗುರುತಿನಿಂದ 15 ಮಂದಿ ಗೆದ್ದು ಸದಸ್ಯರಾಗಿದ್ದು, ಅವರಲ್ಲಿ ಎಂಟು ಸದಸ್ಯರು ಕಾಂಗ್ರೆಸ್ ಮುಖಂಡರ ಜತೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೈಕಮಾಂಡ್‌ಗೆ ವರದಿ ನೀಡಲಾಗುವುದು. ಈ ಎಂಟು ಜನರ ಪಕ್ಷ ವಿರೋಧಿ ಚಟುವಟಿಕೆಗಳಿಂದ ಈ ಚುನಾವಣೆಯಲ್ಲಿ ಜೆಡಿಎಸ್ ನ ಸಹಾಯ ಪಡೆದು ಉಪಾಧ್ಯಕ್ಷೆ ಸ್ಥಾನ ಉಳಿಸಿಕೊಳ್ಳಬೇಕಾಯಿತು. ಇದನ್ನು ಗಂಭೀರವಾಗಿ ಪರಿಗಣಿಸಿ ಈ ಎಂಟು ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಗ್ರಹಿಸಲಾಗುವುದು ಎಂದರು. ತಾಪಂ ಮಾಜಿ ಅಧ್ಯಕ್ಷ ಗೋಪಾಲ್ ಗೌಡ, ಆನಂದ್, ರಾಧಮ್ಮ, ಆಶಾ ರಾಜಪ್ಪ, ಮಂಗಳಾ, ಜೆಡಿಎಸ್‌ನ ಸದಸ್ಯರಾದ ಮೂರ್ತಿ, ನಿರ್ಮಲ ಆಂಜಿನಪ್ಪ, ಬಿಜೆಪಿ ತಾಲೂಕಾಧ್ಯಕ್ಷ ಸೂ.ವೆಂಕಟೇಶ್, ಶೇಷಗಿರಿ, ಗೋಪಾಲ್,ಬಿ.ಕೆ.ರವಿ ಇದ್ದರು.
50 ಅಡಿ ಬಾವಿಗೆ ಬಿದ್ದ ಹಸು ರಕ್ಷಣೆ
ಮುಳಬಾಗಲು: ತಾಲೂಕಿನ ಚನ್ನಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸುವನ್ನು ಅಗ್ನಿ ಶಾಮಕ ದಳ ಸಿಬ್ಬಂದಿ ಗುರುವಾರ ರಾತ್ರಿ ರಕ್ಷಿಸಿದ್ದಾರೆ. ಗ್ರಾಮದ ರಾಮಸ್ವಾಮಿರೆಡ್ಡಿ ಎಂಬವರಿಗೆ ಸೇರಿದ ಜಮೀನಿನಲ್ಲಿ ಹುಲ್ಲು ಮೇಯುತ್ತಿದ್ದ ಸೀಮೆ ಹಸು ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ. ತಕ್ಷಣ ವಿಷಯ ತಿಳಿದ ಮುಳಬಾಗಲು ಅಗ್ನಿಶಾಮಕ ಸಿಬ್ಬಂದಿ ಗ್ರಾಮಕ್ಕೆ ಧಾವಿಸಿ 50 ಅಡಿ ಒಳಗಿನಿಂದ ಹಸುವನ್ನು ಮೇಲಕ್ಕೆತ್ತಿದ್ದಾರೆ. ಹಸುವಿನ ಬೆಲೆ ಸುಮಾರು 70 ಎನ್ನಲಾಗಿದೆ. ಅಗ್ನಿ ಶಾಮಕ ದಳದ ಅಧಿಕಾರಿಗಳಾದ ಸತೀಶ್‌ಕುಮಾರ್, ಕೃಷ್ಣಪ್ಪ, ಮಹೇಂದ್ರ, ರವಿ ಮುಂತಾದವರು ಇದ್ದರು.
ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ
ಕೋಲಾರ: ಕುಪ್ಪೂರು ಹಾಗೂ ಎ.ಮೋತಕಪಲ್ಲಿಯ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಗಳನ್ನು ಖಂಡಿಸಿ ರಾಷ್ಟ್ರೀಯ ಯುವ ವಿದ್ಯಾರ್ಥಿ ಒಕ್ಕೂಟ ಮತ್ತು ರೈತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ನಗರದ ಕಾಲೇಜು ವೃತ್ತದ ಬಳಿ ರಸ್ತೆ ತಡೆ ಮಾಡಿ, ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಿ ಹೆಣ್ಣು ಮಕ್ಕಳ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತ್ತು.  ಪ್ರತಿಭಟನೆಯ ನೇತೃತ್ವವನ್ನು ರಾಜ್ಯ ಸಂಚಾಲಕರಾದ ಹೂಹಳ್ಳಿ ನಾಗರಾಜ್, ವಿಜಯ್‌ಕುಮಾರ್, ಪ್ರಭು, ಮಂಜುನಾಥ, ಪುಷ್ಪಾ, ನೇತ್ರಾವತಿ, ಭಾರತಿ, ಶೆಟ್ಟಿಹಳ್ಳಿ ನಾಗರಾಜ್, ಕೂತ್ತಾಂಡಹಳ್ಳಿ ಸೋಮು, ಮುದುವತ್ತಿ ಮುನಿವೆಂಕಟಪ್ಪ, ನಾರಾಯಣಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.