ಸೂರಪ್ಪಲ್ಲಿಯಲ್ಲಿ ಬೆಂಗಳೂರು ತ್ಯಾಜ್ಯ
ಬಾಗೇಪಲ್ಲಿ: ಬೆಂಗಳೂರಿನಿಂದ ತ್ಯಾಜ್ಯವನ್ನು ತಾಲೂಕಿನ ಮಿಟ್ಟೇಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೂರಪ್ಪಲ್ಲಿ ಗ್ರಾಮದ ಕೃಷಿ ಜಮೀನಿನಲ್ಲಿ ಹಾಕುತ್ತಿರುವುದು ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಯಾವುದೇ ಮುನ್ಸೂಚನೆ ಎರಡು ದಿನಗಳಿಂದ ತ್ಯಾಜ್ಯವನ್ನು ತಂದು ಸುರಿಯಲಾಗುತ್ತಿದೆ. ಈಗಾಗಲೇ ಇಲ್ಲಿ ಎರಡು ಲಾರಿ ಲೋಡ್ ತ್ಯಾಜ್ಯ ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ತ್ಯಾಜ್ಯ ಬಂದು ಬೀಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ದೊಡ್ಡ ಸಮಸ್ಯೆಯಾಗಿದ್ದು, ಬೇರೆ ಬೇರೆ ಕಡೆ ವಿಲೇವಾರಿ ಮಾಡಲು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ರೈತರು ತಮ್ಮ ಹೊಲ, ಗದ್ದೆ ಸೇರಿದಂತೆ ಜಮೀನುಗಳನ್ನು ಹಸನಾಗಿಸಿ ಬೆಳೆ ಇಡಲು ಸಿದ್ಧತೆ ಮಾಡಿಕೊಂಡು ಮಳೆಗಾಗಿ ಕಾದು ಕುಳಿತಿರುವ ಸಮಯದಲ್ಲಿ ರಾಜಧಾನಿಯ ತ್ಯಾಜ್ಯ ಇಲ್ಲಿ ಬಂದು ಸೇರುತ್ತಿದೆ. ಈ ಮೂಲಕ ಬಿಬಿಎಂಪಿ ಜನ ಮತ್ತು ರೈತ ವಿರೋಧಿ ಕೃತ್ಯ ಎಸಗಿದೆ ಎಂದು ತಾಲೂಕು ಡಿವೈಎಫ್ಐ ಸಂಘಟನೆ ಅಧ್ಯಕ್ಷ ಹೇಮಚಂದ್ರ ಆರೋಪಿಸಿದ್ದಾರೆ. ಕೂಡಲೇ ಬೆಂಗಳೂರಿನ ತ್ಯಾಜ್ಯ ಸುರಿಯುವುದನ್ನು ನಿಲ್ಲಿಸದಿದ್ದರೆ ಮುಂಬರುವ ದಿನಗಳಲ್ಲಿ ಸಾರ್ವಜನಿಕರ ಪರವಾಗಿ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಡಿವೈಎಫ್ಐನ ಹೇಮಚಂದ್ರ, ರೈಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ರೆಡ್ಡಿ, ನವ ಕರ್ನಾಟಕ ಪರಿಸರ ರಕ್ಷಣಾ ವೇದಿಕೆಯ ತಾಲೂಕು ಸಮಿತಿಯ ಅಧ್ಯಕ್ಷ ನೀರಜ್ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

