ಅತ್ಯಾಚಾರ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಬಂಗಾರಪೇಟೆ: ತಾಲೂಕಿನ ಬೇತಮಂಗಲ ಹೋಬಳಿಯ ಎ.ಮೋತಕಪಲ್ಲಿ ಗ್ರಾಮದ 6ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ವೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಅಂಬೇಡ್ಕರ್ ಪ್ರತಿಮೆಯಿಂದ ತಾಲೂಕು ಕಚೇರಿಗೆ ಹೊರಟ ಪ್ರತಿಭಟನಾಕಾರರು ಅತ್ಯಾಚಾರ ಆರೋಪಿ ಸಂತೋಷ್ ಎಂಬಾತನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಎ. ಹರೀಶ್ ಅವರು ಮಾಲೂರು ತಾಲೂಕಿನ ಮಾಸ್ತಿ ಹೋಬಳಿ ಕುಪ್ಪೂರು ಗ್ರಾಮದ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದು, ಅವರಿಗೆ ಯಾವುದೇ ರೀತಿಯಲ್ಲಿ ಜಾಮೀನು ನೀಡಬಾರದು, ದೆಹಲಿ ಅತ್ಯಾಚಾರ ಪ್ರಕರಣದ ನಂತರ ಜಾರಿಗೆ ಬಂದ ನಿರ್ಭಯ ಕಾಯ್ದೆ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
15 ವರ್ಷ ವಯಸ್ಸಿನ ವಿದ್ಯಾರ್ಥಿನಿ ಕಳೆದ ಜೂನ್ 28 ರಂದು ತರಗತಿ ಮುಗಿಸಿಕೊಂಡು ಕೆರೆಯ ಪಕ್ಕದಲ್ಲಿ ಮನೆಗೆ ಹೋಗುತ್ತಿದ್ದಾಗ ಇದೇ ಗ್ರಾಮದ ನಾಲ್ವರು ಕಿಡಿಗೇಡಿಗಳು ವಿದ್ಯಾರ್ಥಿನಿಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ನತದೃಷ್ಟ ವಿದ್ಯಾರ್ಥಿನಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ತೀವ್ರವಾಗಿ ನೊಂದಿದ್ದಾರೆ. ಆರೋಪಿಗಳಾದ ಮುನಿಕೃಷ್ಣ, ನಾರಾಯಣಸ್ವಾಮಿ, ಅನಿಲ್ಕುಮಾರ್, ಕೃಷ್ಣರವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ನ್ಯಾಯಾಲಯ ತಕ್ಕ ಶಿಕ್ಷೆ ನೀಡಬೇಕೆಂದು ಸಂಘಟನೆ ಒತ್ತಾಯಿಸಿದೆ.
ಇತ್ತೀಚಿನ ದಿನಗಳಲ್ಲಿ ಇಂತಹ ಅನಾಗರೀಕ ಕೃತ್ಯಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ವಿಷಯವಾಗಿದ್ದು, ಪೊಲೀಸರು ಯಾವುದೇ ಮುಲಾಜಿಗೆ ಒಳಗಾಗದೇ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ಉಷಾ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಎಸ್.ಎಫ್.ಐ., ಜೆಎಂಎಸ್ ಮತ್ತು ಡಿವೈಎಫ್ಐ ಕಾರ್ಯಕರ್ತರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

