ಶಂಕಿ ಡೆಂಘೀ: ಯುವತಿ ಸಾವು
ಶಿಡ್ಲಘಟ್ಟ: ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಬ್ಬಳು ಶಂಕಿತ ಡೆಂಘೀ ಜ್ವರದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಪುರಸಭೆ ಹಿಂಬಾಗದ ಬೀದಿಯಲ್ಲಿ ರೇಷ್ಮೆ ನೂಲು ತೆಗೆಯುವ ಶ್ರೀನಿವಾಸಾಚಾರಿ ಎಂಬುವರ ಪುತ್ರಿ ಭುವನೇಶ್ವರಿ(19) ಮೃತ ಯುವತಿ. ಪ್ರಥಮ ಬಿಎ ವ್ಯಾಸಂಗ ಮಾಡುತ್ತಿದ್ದ ಯುವತಿ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಖಾಸಗಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಜ್ವರ ನಿಯಂತ್ರಣಕ್ಕೆ ಬಾರದ ಕಾರಣ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪಟ್ಟಣದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಬೀದಿಗಳಲ್ಲಿ ಕಸ ತುಂಬಿ ಚರಂಡಿಗಳು ನಾರುತ್ತಿವೆ. ಇದರಿಂದ ಸೊಳ್ಳೆಗಳ ಕಾಟ ಮಿತಿ ಮೀರಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.
ಮರಳು ದಿಬ್ಬ ಕುಸಿದು ಕಾರ್ಮಿಕ ಸಾವು
ಚಿಂತಾಮಣಿ: ಮರಳು ದಿಬ್ಬ ಕುಸಿದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಯನಮಲಪಾಡಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತಪಟ್ಟಿರುವ ಕೂಲಿ ಕಾರ್ಮಿಕ ಶ್ರೀನಿವಾಸಪುರ ತಾಲೂಕಿನ ರಾಯಲಪಾಡು ಹೋಬಳಿಯ ಮುದಿಮಡುಗು ಗ್ರಾಮದ ನರಸಿಂಹಪ್ಪ(55). ಯನಮಲಪಾಡಿ ಗ್ರಾಮದಲ್ಲಿ ರಫೀಕ್ ಎಂಬ ಟ್ರ್ಯಾಕ್ಟರ್ ಮಾಲೀಕನಿಗೆ ಸೇರಿದ ಮರಳನ್ನು ತೆಗೆಯುವಾಗ ಮರಳು ದಿಬ್ಬು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದ ಘಟನಾ ಸ್ಥಳಕ್ಕೆ ಪೊಲೀಸ್ ವೃತ್ತ ನಿರೀಕ್ಷಕ ವೆಂಕಟೇಶಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿ ಬಟ್ಲಹಳ್ಳಿ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ಮುಂದುವರೆಸಿದ್ದಾರೆ.
ಹಳೆ ದ್ವೇಷ: ಕೊಲೆಗೆ ಯತ್ನ
ಕೆಜಿಎಫ್: ಹಳೆ ದ್ವೇಷದ ಹಿನ್ನಲೆಯಲ್ಲಿ ಸ್ವಂತ ಮಾವಂದಿರೇ ಬಾಮೈದನಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೇತಮಂಗಲ ಠಾಣಾ ಹಳೇ ಟೌನ್ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸೋಮ ಮತ್ತು ಬಾಬು, ನಾಗರಾಜು ಅವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಸೋಮ(24) ಎಂಬುವನಿಗೆ ಆತನ ಸ್ವಂತ ಮಾವಂದಿರಾದ ನಾಗರಾಜ್ ಮತ್ತು ಬಾಬು ಎಂಬುವರು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದು ಶೇ. 60 ಭಾಗ ಸುಟ್ಟಿದ್ದು, ಆತನನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

