ಕೋಲಾರ

ಸೂರಪ್ಪಲ್ಲಿಯಲ್ಲಿ ಬೆಂಗಳೂರು ತ್ಯಾಜ್ಯ, ಗ್ರಾಮಸ್ಥರ ಭಾರಿ ವಿರೋಧ

Published On :

ಬಾಗೇಪಲ್ಲಿ: ಮಂಡೂರು ಗ್ರಾಮಸ್ಥರ ವಿರೋಧದ ಬಳಿಕ ಬೆಂಗಳೂರಿನ ತ್ಯಾಜ್ಯ ವಿಲೇವಾರಿಗೆ ಹೆಣಗಾಡುತ್ತಿರುವ ಬಿಬಿಎಂಪಿ ಈಗ ಚಿಕ್ಕಬಳ್ಳಾಪುರದತ್ತ ತನ್ನ ದೃಷ್ಟಿ ನೆಟ್ಟಿದೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಸೂರಪ್ಪಲ್ಲಿ ಗ್ರಾಮದ ಕೃಷಿ ಜಮೀನಿನಲ್ಲಿ ರಾಶಿ ರಾಶಿ ಕಸ ತಂದು ಸುರಿಯತ್ತಿದೆ. ಬಿಬಿಎಂಪಿ ಹಾಗೂ ಗುತ್ತಿಗೆದಾರರ ಈ ನಿರ್ಧಾರ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಯಾವುದೇ ಮಾಹಿತಿ ನೀಡದೆ ಎರಡು ದಿನಗಳಿಂದ ಬೆಂಗಳೂರಿನ ತ್ಯಾಜ್ಯವನ್ನು ಇಲ್ಲಿ ಸುರಿಯಲಾಗುತ್ತಿದೆ. ಈಗಾಗಲೇ ಇಲ್ಲಿ ಎರಡು ಲಾರಿ ಲೋಡ್ ತ್ಯಾಜ್ಯ ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ತ್ಯಾಜ್ಯ ಬಂದು ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ದೂರಿದ್ದಾರೆ.
ಇದು ಹೊಲ ಹಸನು ಮಾಡಿ ಕೃಷಿ ಕಾರ್ಯ ಆರಂಭಿಸುವ ಸಮಯ. ಇಂಥ ಸಮಯದಲ್ಲಿ ಬಿಬಿಎಂಪಿಯವರು ಮತ್ತು ಗುತ್ತಿಗೆದಾರರು ಶಾಮೀಲಾಗಿ ರಾಜಧಾನಿಯ ತ್ಯಾಜ್ಯ ತಂದು ಇಲ್ಲಿ ಸುರಿಯುತ್ತಿದ್ದಾರೆ. ಈ ಮೂಲಕ ಬಿಬಿಎಂಪಿ ಜನ ಮತ್ತು ರೈತ ವಿರೋಧಿ ಕೃತ್ಯ ಎಸಗುತ್ತಿದೆ ಎಂದು ತಾಲೂಕು ಡಿವೈಎಫ್‌ಐ ಸಂಘಟನೆ ಅಧ್ಯಕ್ಷ ಹೇಮಚಂದ್ರ ಆರೋಪಿಸಿದ್ದಾರೆ.
ಪ್ರತಿಭಟನೆ ಎಚ್ಚರಿಕೆ: ಬಿಬಿಎಂಪಿ ಅಧಿಕಾರಿಗಳು ಕಸ ವಿಲೇವಾರಿ ಮಾಡುವ ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಂಡ ಕಂಡಲ್ಲಿ ಕಸ ಸುರಿಯುತ್ತಿದ್ದಾರೆ. ಕೂಡಲೇ ತ್ಯಾಜ್ಯ ಸುರಿಯುವುದನ್ನು ನಿಲ್ಲಿಸದಿದ್ದರೆ ಮುಂಬರುವ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.